ಕಾಂಗ್ರೆಸ್ ಅಪಪ್ರಚಾರಕ್ಕೆ ಕಿವಿಗೊಡದಿರಿ: ಜೆಡಿಎಸ್ ನಿಯೋಜಿತ ಅಭ್ಯರ್ಥಿ ಬಳಿಗಾರ್
ಶಿರಾಳಕೊಪ್ಪ: ತಾಲೂಕಿನಾದ್ಯಂತ ಮರು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ಬೆಂಬಲ ನೀಡಲಿದೆ ಎಂದು ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ಮತದಾರರು ಇದಕ್ಕೆಲ್ಲ ಕಿವಿಗೊಡಬಾರದು ಎಂದು ಜೆಡಿಎಸ್ ನಿಯೋಜಿತ ಅಭ್ಯರ್ಥಿ ಬಳಿಗಾರ್ ತಿಳಿಸಿದರು.
ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜೆಡಿಎಸ್ಗೆ ತಾಲೂಕಿನಲ್ಲಿ ಅನುಕಂಪದ ಮತಗಳಿವೆ. ಹಾಗೆಯೇ ಬೆಂಬಲವಿದೆ. ಹೀಗಿರುವಾಗ ಕಾಂಗ್ರೆಸ್ ಜೊತೆ ಯಾವುದೇ ಹೊಂದಾಣಿಕೆಯ ಮಾತೇ ಇಲ್ಲ ಎಂದು ಸ್ಪಷ್ಟ ಪಡಿಸಿದರು.
ಪಕ್ಷ ಈಗಾಗಲೇ ಹೋಬಳಿ ಮಟ್ಟದಲ್ಲಿ ಕಾರ್ಯಕರ್ತರ ಸಭೆ ನಡೆಸುತ್ತಿದೆ. ಬಿಜೆಪಿ ವಿರುದ್ಧ ನಮ್ಮನ್ನು ಸೂಕ್ತಅಭ್ಯರ್ಥಿ ಎಂದು ತಾಲೂಕಿನ ಮತದಾರರು ಬೆಂಬಲಿಸುತ್ತಿದ್ದಾರೆ.
ಕಳೆದ ಚುನಾವಣೆ ನಂತರ ತಾಲೂಕಿನ ಕಾರ್ಯಕರ್ತರೊಂದಿಗೆ ತಾವು ನಿರಂತರ ಸಂಪರ್ಕ ಹೊಂದಿದ್ದು, ಕಳೆದ 15-20 ವರ್ಷಗಳಿಂದ ಇಲ್ಲಿನ ಜನರ ಸಂಕಷ್ಟಕ್ಕೆ ಸ್ಪಂದಿಸಿರುವ ನನ್ನನ್ನು ತಾಲೂಕಿನ ಜನತೆ ಕೈಬಿಡುವುದಿಲ್ಲ. ಹಾಗೆಯೇ ಬಿಜೆಪಿ ಮತ್ತು ಕಾಂಗ್ರೆಸ್ನ ಹಲವಾರು ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದರು.
ತಾ. ಬಿಜೆಪಿ ಅಧ್ಯಕ್ಷ ಹಾಗೂ ಜಿಪಂ ಸದಸ್ಯ ದಾನಿ ರುದ್ರಪ್ಪನಂತಹವರು ಕಾಂಗ್ರೆಸ್ನಲ್ಲಿ ಸರಿಯಾದ ಅಭ್ಯರ್ಥಿ ಇಲ್ಲದ ಕಾರಣ ಜೆಡಿಎಸ್ ಅಭ್ಯರ್ಥಿ ಬಳಿಗಾರ್ ಉತ್ತಮ ವ್ಯಕ್ತಿ ಅವರನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಗಜೇಂದ್ರ, ತಾ. ಪ್ರಧಾನ ಕಾರ್ಯದರ್ಶಿ ಜಯಾನಾಯ್ಕ ಉಡಗಣಿ ಹೋಬಳಿ ಮುಖಂಡ ತೇಜ್ಯಾನಾಯಕ್, ತಾಳಗುಂದ ಹೋಬಳಿ ಮುಖಂಡ ರುದ್ರಪ್ಪ, ಕೊಟ್ರೇಶಪ್ಪ, ಮಂಜುನಾಥ ಅನೇಕ ಪ್ರಮುಖರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

