ಶಿವಮೊಗ್ಗ

ನೀರಿನಲ್ಲಿ ಮುಳುಗಿದವರ ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ್ದು ತಪ್ಪೇ...

Published On :

ಕ.ಪ್ರ. ವಾರ್ತೆ, ಶಿವಮೊಗ್ಗ, ಜುಲೈ 28
ನೀರಿನಲ್ಲಿ ಮುಳುಗಿದವರನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ ಕಾರಣಕ್ಕೆ ನಾವೀಗ ಪೊಲೀಸ್ ಕೇಸು ಎದುರಿಸ ಬೇಕಾಗಿದೆ. ಆಸ್ಪತ್ರೆಯಲ್ಲಿ ಇದ್ದ ಅವ್ಯವಸ್ಥೆಯನ್ನು ಪ್ರಶ್ನಿಸಿದ್ದೇ ತಪ್ಪೇ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್ ಪ್ರಶ್ನಿಸಿದ್ದಾರೆ.
ಶುಕ್ರವಾರ ಸಂಜೆ ಸಿಗಂದೂರು ಬಳಿ ಶರಾವತಿ ಹಿನ್ನೀರಿನಲ್ಲಿ ಮುಳುಗುತ್ತಿದ್ದ ಟ್ರಾಕ್ಸ್‌ನಲ್ಲಿದ್ದ ಐವರನ್ನು ಬಚಾವ್ ಮಾಡಿದ್ದ ಶ್ರೀಕಾಂತ್ ಹಾಗೂ ಗೆಳೆಯರು ದುರಂತಕ್ಕೆ ಸಿಲುಕಿದ್ದವರನ್ನು ತಮ್ಮ ವಾಹನದಲ್ಲಿಯೇ ಸಾಗರ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿದ್ದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ಅವ್ಯವಸ್ಥೆಯನ್ನು ಪ್ರಶ್ನಿಸಿ, ಕೂಡಲೇ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ, ನಂತರ ಶಿವಮೊಗ್ಗಕ್ಕೆ ವಾಪಸಾಗಿದ್ದರು.
ಈ ಘಟನೆಯ ನಂತರ ವೈದ್ಯರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಮ.ಸ. ನಂಜುಂಡಸ್ವಾಮಿ ಅವರು ಶ್ರೀಕಾಂತ್, ಜತೆಗಿದ್ದ ಶಿವಮೊಗ್ಗ ನಗರ ಪಾಲಿಕೆ ಸದಸ್ಯ ನಾಗರಾಜ ಕಂಕಾರಿ, ಪಾಲಾಕ್ಷಿ, ಮುಖಂಡ ಜಿ.ಡಿ. ಮಂಜುನಾಥ್ ಸೇರಿದಂತೆ ಹಲವರ ವಿರುದ್ಧ ದೂರು ದಾಖಲಿಸಿದ್ದರು.
ರಾತ್ರೋರಾತ್ರಿ ದೂರು ದಾಖಲಿಸಿಕೊಂಡ ಪೊಲೀಸರು ಇವರನ್ನು ಬಂಧಿಸಲೂ ಬಂದಿದ್ದರು. ಕೊನೆಗೆ ಭಾನುವಾರ ಜಿ.ಡಿ. ಮಂಜುನಾಥ್ ಹಾಗೂ ವಾಹನ ಚಾಲಕ ವಿನೋದ್ ಅವರನ್ನು ಬಂಧಿಸಿ ನ್ಯಾಯಾಧೀಶರೆದುರು ಹಾಜರು ಪಡಿಸಿದ್ದರು.
ರಕ್ಷಿಸಿದ್ದು ಮುಖ್ಯ ಅಂಶ
ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್, ಈ ರೀತಿ ದೂರು ದಾಖಲಿಸಿದರೆ ಸಂಕಷ್ಟದಲ್ಲಿರುವವರ ನೆರವಿಗೆ ಯಾರು ಬರುತ್ತಾರೆ ಎಂದು ಪ್ರಶ್ನಿಸಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಮ.ಸ. ನಂಜುಂಡಸ್ವಾಮಿ ರಾಜಕೀಯ ಮಾಡಬೇಕೆಂದಿದ್ದರೆ ಮೊದಲು ಸರ್ಕಾರಿ ನೌಕರಿ ಬಿಟ್ಟು ಹೊರಬರಲಿ ಎಂದು ಸವಾಲೆಸೆದರು.ಪತ್ರಿಕಾಗೋಷ್ಠಿಯಲ್ಲಿ ಮುಖಂಡ ಎಚ್.ವಿ. ಮಹೇಶ್ವರಪ್ಪ, ಚಂದ್ರಶೇಖರ್,ತ್ಯಾಗರಾಜ್, ಪಂಚಾಕ್ಷರಿ,ಮಂಜುನಾಥ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.