ಶಿವಮೊಗ್ಗ

ಪರಿಸರ ಮಾಲಿನ್ಯದಿಂದ ಎಲ್ಲರಿಗೂ ತೊಂದರೆ

Published On :

ಭದ್ರಾವತಿ: ಪರಿಸರ ಮಾಲಿನ್ಯದಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮ ಮತ್ತು ಅದನ್ನು ತಡೆಗಟ್ಟುವ ಬಗ್ಗೆ ತಮ್ಮ ವಿದ್ಯಾರ್ಥಿ ಜೀವನದ ಕಲಿಕೆಯೇ ಇಂದು ಪರಿಸರದ ಬಗ್ಗೆ ಅರಿವು ಮೂಡಿಸಲು ಸಹಾಯ ಮಾಡುತ್ತಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನಾಧಿಕಾರಿ ಹೇಮಲತ ತಿಳಿಸಿದರು. ಅವರು ಭದ್ರಾವತಿ ತಾಲೂಕಿನ ದಾಸರಕಲ್ಲಳ್ಳಿಯ ಶ್ರೀ ಮಂಜುನಾಥ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಪರಿಸರ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.
     ಪರಿಸರ ಮಾಲಿನ್ಯವು ಎಲ್ಲರಿಗೂ ತೊಂದರೆ ಉಂಟುಮಾಡುತ್ತಿದೆ. ಕೆಲವರು ದುಶ್ಟಟಕ್ಕೆ ಬಲಿಯಾಗಿ ಇತರರಿಗೂ ತೊಂದರೆ ಕೊಡತೊಡಗಿದ್ದಾರೆ. ಇದನ್ನು ವಿರೋಧಿಸುವ ಮೂಲಕ ಪರಿಸರ ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಮಲತಾ ಹೇಳಿದರು.
ಸಂಪನ್ಮೂಲ ವ್ಯಕ್ತಿ ಹಾಗೂ ಶಿಕ್ಷಕ ಲೋಕೇಶ್ ಪರಿಸರ ಸಂರಕ್ಷಣೆ ಬಗ್ಗೆ ಮಾಹಿತಿ ನೀಡಿದರು. ಪರಿಸರ ಸ್ನೇಹಿ ಗ್ರೀನ್‌ವೇ ಸಂಸ್ಥೆ ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಪರಿಸರ ಸ್ನೇಹಿ ಒಲೆ ವಿತರಿಸಿದರು. ಗ್ರಾಪಂ ಅಧ್ಯಕ್ಷೆ ನಾಗರತ್ನಮ್ಮ ಅಧ್ಯಕ್ಷತೆ ವಹಿಸಿದ್ದರು. ನಾಗಭೂಷಣ ಪೈ ಸ್ವಾಗತಿಸಿದರು. ಗೀತಾ ವಂದಿಸಿದರು.

ಸಿಗಂದೂರು ಭಕ್ತರಿಗೆ ಅಗತ್ಯ ಸೌಕರ್ಯ: ಜಿಲ್ಲಾಡಳಿತಕ್ಕೆ ಯುವ ಜೆಡಿಎಸ್ ಮನವಿ
ಶಿವಮೊಗ್ಗ: ಪವಿತ್ರಾ ಯಾತ್ರಾಸ್ಥಳ ಸಿಗಂದೂರಿಗೆ ಆಗಮಿಸುವ ಭಕ್ತರಿಗೆ ರಕ್ಷಣೆ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಜಿಲ್ಲಾ ಯುವ ಜನತಾದಳ ಕಾರ್ಯಕರ್ತರು ಶನಿವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ವಿಪುಲ್‌ಬನ್ಸಲ್ ಈ ಭಾಗದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ಮಳೆಗಾಲ ಮುಗಿಯುತ್ತಿದ್ದಂತೆ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಕಾರ್ಯಗತ ಮಾಡುತ್ತಿರುವುದಾಗಿ ಹೇಳಿದರು. ಒತ್ತಾಯ: ನದಿಯ ಎರಡೂ ಭಾಗಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಿ, ಔಟ್‌ಪೋಸ್ಟ್ ಸ್ಥಾಪಿಸುವುದು, ಎರಡೂ ಕಡೆಗಳಲ್ಲಿ ವಿದ್ಯುತ್‌ದೀಪ ಅಳವಡಿಸುವುದು, ಅಪಾಯಕಾರಿ ಸ್ಥಳಗಳಲ್ಲಿ ಫಲಕ ಹಾಕಿ ತಡೆಗೋಡಿ ನಿರ್ಮಿಸಬೇಕು. ಬಾಡಿಗೆ ಕ್ರೂಷರ್ ವಾಹನಗಳ ಗುಣಮಟ್ಟ ಪರಿಶೀಲಿಸಿ ಸುಸ್ಥಿತಿಯಲ್ಲಿರುವ ವಾಹನಗಳ ಸಂಚಾರಕ್ಕೆ ಕ್ರಮಕೈಗೊಳ್ಳಬೇಕು. ದೇವಸ್ಥಾನ ಆಡಳಿತ ಮಂಡಳಿಯಿಂದ ಅಥವಾ ತಾಲೂಕು ಆಡಳಿತವೇ ಭಕ್ತರಿಗೆ ಅನುಕೂಲವಾಗುವಂತೆ ವಾಹನದ ವ್ಯವಸ್ಥೆ ಮಾಡಬೇಕು, ಭಕ್ತರ ಅನುಕೂಲಕ್ಕಾಗಿ ಅವರ ವಾಹನಗಳನ್ನು ಎರಡೂ ಕಡೆ ಲಾಂಚ್‌ನಲ್ಲಿ ಸಾಗಿಸಲು ಹೆಚ್ಚುವರಿ ಲಾಂಚ್ ವ್ಯವಸ್ಥೆ ಮಾಡಬೇಕು ಎಂಬ ಬೇಡಿಕೆಗಳನ್ನು ಇದೇ ಸಂದರ್ಭದಲ್ಲಿ ಜೆಡಿಎಸ್ ಮುಖಂಡರು ಒತ್ತಾಯಿಸಿದರು.
ಸಂಘಟನೆ ಜಿಲ್ಲಾಧ್ಯಕ್ಷ ಜಿ.ಡಿ.ಮಂಜುನಾಥ, ಪಾಲಿಕೆ ಸದಸ್ಯ ನಾಗರಾಜ ಕಂಕಾರಿ, ಎಚ್.ಪಾಲಾಕ್ಷಿ, ಬಾಬು ಒತ್ತಾಯಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.