ವೇಶ್ಯಾವಾಟಿಕೆ: 6 ಮಂದಿ ಬಂಧನ
ಭದ್ರಾವತಿ: ಪಟ್ಟಣದ ಹುಡ್ಕೊ ಕಾಲೋನಿಯ ಮನೆಯೊಂದರ ಮೇಲೆ ಮಂಗಳವಾರ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 22-25 ವರ್ಷದ ಮೂವರು ಮಹಿಳೆಯರು ಹಾಗೂ ತಿರುಮೂರ್ತಿ, ಸತೀಶ್ ಹಾಗೂ ಹೇಮ ಎಂಬ ಮೂವರು ಪುರುಷರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಖಚಿತ ವರ್ತಮಾನದ ಮೇರೆಗೆ ಕಾಗದನಗರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ನಾಗಮ್ಮ ಡಿವೈಎಸ್ಪಿ ಸದಾನಂದ ನಾಯಕ್ ಅವರ ಮಾರ್ಗದರ್ಶನದಲ್ಲಿ ಭದ್ರಾವತಿ ಗ್ರಾಮಾಂತರ ಸಿಪಿಐ ರಮೇಶ್ ಅವರ ನೇತೃತ್ವದಲ್ಲಿ ಕಾರ್ಯಾಚಾರಣೆ ನಡೆದಿತ್ತು.
ಈ ವ್ಯವಹಾರ ಬಹಳ ದಿನಗಳಿಂದ ನಡೆಯುತ್ತಿದ್ದು, ಹುಡ್ಕೊ ಕಾಲೋನಿಯಲ್ಲಿ ರಸ್ತೆಬದಿಯಲ್ಲಿ ಕ್ಯಾಂಟಿನ್ ನಡೆಸುತ್ತಿದ್ದ ಮಹಿಳೆಯೋರ್ವರು ಇದರ ರೂವಾರಿ ಎಂದು ಹೇಳಲಾಗಿದೆ. ಕಾಗದನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

