ಶಿವಮೊಗ್ಗ

ಸಿಗಂಧೂರಿಗೆ ಬಸ್ ಸೌಲಭ್ಯಕ್ಕೆ ಮನವಿ

Published On :

ಸಾಗರ: ಸಿಗಂದೂರಿಗೆ ಸಾರಿಗೆ ಬಸ್ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ತಾಲೂಕು ಬಿಜೆಪಿ ಘಟಕದಿಂದ  ಡಿಪೋ ಮುಖ್ಯಸ್ಥ ರಮೇಶ್ ಅವರಿಗೆ ಮನವಿ ಸಲ್ಲಿಸಲಾಯಿತು. ಬಿಜೆಪಿ ಜಿಲ್ಲಾ ಮುಖಂಡ ಟಿ.ಡಿ.ಮೇಘರಾಜ್ ಮಾತನಾಡಿ, ಕಳೆದ 2 ತಿಂಗಳಿನಿಂದ ಸಾಗರ-ಹೊಳೆಬಾಗಿಲು-ಸಿಗಂದೂರಿಗೆ ಸಂಚರಿಸುತ್ತಿದ್ದ ಸಾರಿಗೆ ಬಸ್‌ನ್ನು ನಿಲ್ಲಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ವಿವರಿಸಿದರು.  ಎಪಿಎಂಸಿ ಉಪಾಧ್ಯಕ್ಷ ಬಿ.ಎ.ಇಂದೂಧರ ಗೌಡ ಮಾತನಾಡಿ, ಕೆಎಸ್‌ಆರ್‌ಟಿಸಿ ಬಸ್ ಸೌಲಭ್ಯ ಕಡಿತಗೊಳಿಸಿರುವುದರಿಂದ ಹೊಳೆಬಾಗಿಲು, ಅಂಬಾರಗೋಡ್ಲು, ಕೋಳೂರು, ಹುಲಿದೇವರಬನ, ಗೆಣಸಿನಕುಣಿ, ಆವಿನಹಳ್ಳಿ ಜನತೆ ಸಾರಿಗೆ ಬಸ್ ಸೌಲಭ್ಯದಿಂದ ವಂಚಿತರಾಗುವಂತೆ ಆಗಿದೆ ಎಂದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಯು.ಎಚ್.ರಾಮಪ್ಪ,ರಾಮಚಂದ್ರಭಟ್, ಪ್ರಕಾಶ್‌ಕುಂಠೆ, ಗಣೇಶಪ್ರಸಾದ್ ಇತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.