ಟ್ರಾಯ್‌ನಿಂದ ಮಾಹಿತಿ ಕಾರ್ಯಾಗಾರ ಇಂದು
ಶಿವಮೊಗ್ಗ: ದೂರಸಂಪರ್ಕ ಗ್ರಾಹಕರ ಹಕ್ಕು ಮತ್ತು ಸವಲತ್ತುಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ದೂರಸಂಪರ್ಕ ನಿಯಂತ್ರಣಾ ಪ್ರಾಧಿಕಾರದ ಪ್ರಾದೇಶಿಕ ಕಚೇರಿಯು ದೂರಸಂಪರ್ಕ ಗ್ರಾಹಕರ ಮಾಹಿತಿ ಕಾರ್ಯಾಗಾರವನ್ನು ಜೂ. 12ರಂದು ಮಧ್ಯಾಹ್ನ 2.30ಕ್ಕೆ ಶಿವಮೊಗ್ಗ ಸುವರ್ಣ ಸಂಸ್ಕೃತಿ ಭವನದಲ್ಲಿ ಹಮ್ಮಿಕೊಂಡಿದೆ.
ಮಧ್ಯಾಹ್ನ 2.30ರಿಂದ 2.50ರವರೆಗೆ ನೋಂದಣಿ ಪ್ರಕ್ರಿಯೆ ನಡೆಯಲಿದ್ದು, ನಂತರ ಕಾರ್ಯಕ್ರಮ ಆರಂಭವಾಗಲಿದೆ.
ಟ್ರಾಯ್‌ನ ಪ್ರಾದೇಶಿಕ ಮುಖ್ಯಸ್ಥ ಡಾ.ಸಿಬಿಚೆನ್ ಕೆ ಮ್ಯಾಥ್ಯೂ(ಕರ್ನಾಟಕ ಮತ್ತು ಕೇರಳ) ಅವರು ಗ್ರಾಹಕರ ಹಿತಾಸಕ್ತಿ ಕಾಪಾಡಲು ಟ್ರಾಯ್ ತೆಗೆದುಕೊಂಡ ಕ್ರಮಗಳ ಬಗ್ಗೆ, ಗ್ರಾಹಕರ ಹಕ್ಕು ಸವಲತ್ತುಗಳ ಬಗ್ಗೆ ಮತ್ತು ಸೇವಾ ಸಂಸ್ಥೆಗಳು ತಮ್ಮ ಗ್ರಾಹಕರಿಗೆ ಸೇವೆಯನ್ನು ಹೇಗೆ ಪೂರೈಸಬೇಕು ಎಂಬುದರ ಬಗ್ಗೆ ಮಾತನಾಡಲಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಎಂಟು ಸರ್ವಿಸ್ ಪ್ರೊವೈಡರ್, 54.31 ಮಿಲಿಯನ್ ಮೊಬೈಲ್ ಮತ್ತು 2.32 ಮಿಲಿಯನ್ ಸ್ಥಿರ ದೂರವಾಣಿ ಗ್ರಾಹಕರಿದ್ದಾರೆ. ಹೆಚ್ಚಿನ ಗ್ರಾಹಕರಿಗೆ ಟ್ರಾಯ್‌ನ ನಿಯಮಾವಳಿಗಳ ಬಗ್ಗೆ ಮಾಹಿತಿ ತಿಳಿದಿಲ್ಲ. ದೂರು ನಿವಾರಣಾ ವ್ಯವಸ್ಥೆ, ಮೇಲ್ಮನವಿ ಪ್ರಾಧಿಕಾರ, ಮೊಬೈಲ್ ಪೋರ್ಟಬಿಲಿಟಿ, ಅನಪೇಕ್ಷಿತ ವಾಣಿಜ್ಯಾತ್ಮಕ ಸಂದೇಶಗಳ ಮೇಲೆ ನಿಷೇಧ, ಮೌಲ್ಯವರ್ಧಿತ ಸೇವೆ ಇವುಗಳ ಬಗ್ಗೆ ಗ್ರಾಹಕರಿಗೆ ಮಾಹಿತಿಯ ಅವಶ್ಯಕತೆ ಇದೆ. ಎಲ್ಲಾ ಕೇಬಲ್ ಚಂದಾದಾರರಿಗೆ ಡಿಜಿಟಲ್ ಸೆಟ್ಟಾಪ್ ಬಾಕ್ಸ್ ಕಡ್ಡಾಯವಾಗಿದೆ. ಇವುಗಳ ಬಗ್ಗೆ ಕಾರ್ಯಕ್ರಮದಲ್ಲಿ ಚರ್ಚಿಸಲಾಗುವುದು ಮತ್ತು ಗ್ರಾಹಕರ ಕೈಪಿಡಿಯನ್ನು ಉಚಿತವಾಗಿ ನೀಡಲಾಗುವುದು ಎಂದು ಹಿರಿಯ ಸಂಶೋಧನಾ ಅಧಿಕಾರಿ ಲತಾ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

