ಸೂಡಾ ಹಗರಣ ವಿರುದ್ಧ ಎಸ್ಡಿಪಿಐ ಪ್ರತಿಭಟನೆ
ಶಿವಮೊಗ್ಗ: ವಾಜಪೇಯಿ ಬಡಾವಣೆ ನಿವೇಶನ ಹಂಚಿಕೆ ಅಕ್ರಮ ವಿರೋಧಿಸಿ ನಗರದಲ್ಲಿ ಗುರುವಾರ ಸೋಷಿಯಲಿಸ್ಟ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನಿವೃತ್ತ ನ್ಯಾಯಾಧೀಶ ರವೀಂದ್ರನಾಥ್ ನೀಡಿರುವ ವರದಿಯ ಶಿಫಾರ್ಸಿನ ಮೇರೆಗೆ ತಕ್ಷಣವೇ ಕ್ರಮ ಕೈಗೊಳ್ಳಬೇಕು. ಅಕ್ರಮ ನಡೆಸಿದರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಬಂಧಿಸಬೇಕು ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದ್ದಾಗ ರಚನೆಯಾದ ವಾಜಪೇಯಿ ಬಡಾವಣೆ ನಿವೇಶನಗಳನ್ನು ತಮಗಿಷ್ಟ ಬಂದವರಿಗೆ ಹಂಚಲಾಗಿದೆ. ಹಾಗಾಗಿ ಸೂಡಾ ಅಧ್ಯಕ್ಷರಾಗಿದ್ದ ಜ್ಞಾನೇಶ್ವರ್ ಮತ್ತು ದತ್ತಾತ್ರಿ, ಸದಸ್ಯ ಬಿ.ಕೆ.ಶ್ರೀನಾಥ್, ಅಧಿಕಾರಿಗಳು ಹಾಗೂ ಶಾಮೀಲಾದ ವ್ಯಕ್ತಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಎಸ್ಡಿಪಿಐ ಮುಖಂಡರಾದ ಕೆ.ಬಿ.ಬಶೀರ್ ಅಹ್ಮದ್, ಎಂ.ಬಾಲಸುಬ್ರಹ್ಮಣ್ಯಂ, ಎಜಾಜ್ ಪಾಷಾ, ಅಲ್ಲಾಭಕ್ಷ್, ಖಲೀಂ ಸೇರಿದಂತೆ ಹಲವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

