ಕೀರ್ತಿ ಕೋಲ್ಗಾರ್‌ಗೆ ಹಾಮಾನಾ ಪ್ರಶಸ್ತಿ
ಶಿವಮೊಗ್ಗ: ಇಲ್ಲಿನ ಕರ್ನಾಟಕ ಸಂಘದ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಕನ್ನಡಪ್ರಭದ ಕೀರ್ತಿ ಕೋಲ್ಗಾರ್‌ರ 'ತೇಜಸ್ವಿ ಬದುಕಿದ್ದಾರೆ' ಅಂಕಣಕ್ಕೆ ಡಾ.ಹಾ.ಮಾ.ನಾಯಕ್ ಹೆಸರಿನಲ್ಲಿ ನೀಡುವ ವಿಶೇಷ ಪ್ರಶಸ್ತಿ ಲಭಿಸಿದೆ. ಕರ್ನಾಟಕ ಸಂಘವು, ತನ್ನ ಗೌರವ ಸದಸ್ಯರ ಹೆಸರಿನಲ್ಲಿ ಸಾಹಿತ್ಯದ ನಾನಾ ಪ್ರಕಾರಗಳಿಗೆ ವಾರ್ಷಿಕ ಪ್ರಶಸ್ತಿಗಳನ್ನು ಕೊಡಮಾಡುತ್ತಿದ್ದು, 2013ನೆ ಸಾಲಿನ ಪ್ರಶಸ್ತಿ ಪುರಸ್ಕೃತರ ವಿವರವನ್ನು ಸಂಘದ ಕಾರ್ಯದರ್ಶಿ ಡಾ.ನಾಗಭೂಷಣ ಬಿಡುಗಡೆ ಮಾಡಿದ್ದಾರೆ. ಪ್ರಶಸ್ತಿಯು ತಲಾ 5 ಸಾವಿರ ರುಪಾಯಿ ನಗದು ಪುರಸ್ಕಾರ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ. ಈ ಪ್ರಶಸ್ತಿಗಳನ್ನು ಜುಲೈ 5ರಂದು ಪ್ರದಾನ ಮಾಡಲಾಗುತ್ತದೆ ಎಂದು ಡಾ.ಎಚ್.ಎಸ್.ನಾಗಭೂಷಣ ತಿಳಿಸಿದ್ದಾರೆ.
ಕಾದಂಬರಿ ವಿಭಾಗದಲ್ಲಿ ರಾಷ್ಟ್ರಕವಿ ಕುವೆಂಪು ಪ್ರಶಸ್ತಿಗೆ ಸುಶೀಲಾ ಡೋಣೂರ ಅವರ ನ್ಯಾನ್ಸಿ ಕಾದಂಬರಿ ಭಾಜನವಾಗಿದ್ದು, ಅನುವಾದ ಪ್ರಕಾರದಲ್ಲಿ ಡಾ. ಎಸ್.ವಿ. ಪರಮೇಶ್ವರ ಭಟ್ಟ ಪ್ರಶಸ್ತಿಯು ಆರ್. ಪಿ. ಹೆಗಡೆಯವರ ಆದಿ ಅನಾದಿ ಕೃತಿಗೆ ನೀಡಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

