ಡಿಸೆಂಬರ್ ವೇಳೆಗೆ ಸೈನ್ಸ್ ಸೆಂಟರ್ ಪೂರ್ಣ: ಆಯನೂರು
ಆಯನೂರು: ಇಲ್ಲಿನ ಪ್ರೌಢಶಾಲಾ ಆವರಣದಲ್ಲಿ ನಿರ್ಮಾಣಗೊಳ್ಳುತ್ತಿರುವ ಸೈನ್ಸ್ ಸೆಂಟರ್, ತಾರಾಲಯ ಕಾಮಗಾರಿ ಪ್ರಗತಿಯಲ್ಲಿದ್ದು, ಬರುವ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್ ತಿಳಿಸಿದರು.
ಕಾಮಗಾರಿ ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸಿ ಮಾಹಿತಿ ನೀಡಿದ ಅವರು, ಆಯನೂರು ಒಂದು ಸೈನ್ಸ್ ಕ್ಲಬ್ ಆಗುವ ನಿಟ್ಟಿನಲ್ಲಿ ಈ ಯೋಜನೆ ಮಹತ್ವ ಪೂರ್ಣದ್ದು. ಈ ಯೋಜನೆಯಿಂದ ಮಕ್ಕಳಿಗೆ ಸಾಕಷ್ಟು ಉಪಯೋಗವಾಗಲಿದೆ ಎಂದರು.
ನಿರ್ಮಿತಿ ಕೇಂದ್ರದ ಅಧಿಕಾರಿ ಯೋಜನೆ ಕುರಿತು ಮಾಹಿತಿ ನೀಡಿ, ಸೈನ್ಸ್ ಸೆಂಟರ್ ಆರಂಭದಲ್ಲಿ ಮಾನವನ ವಿಕಾಸದ ಬಗ್ಗೆ ಮಾಹಿತಿ ಇರುತ್ತದೆ. ನಂತರ 60 ಸೀಟರ್ನ ತಾರಾಲಯ ಇರುತ್ತದೆ. ಸದ್ಯದ ಅಪ್ ಡೇಟ್ ಆದ ತಾರಾಲಯ ಇದಾಗಿದ್ದು, ತಾರಾಲಯದ ಹೊರ ಆವರಣ ಮತ್ತು ಮೊದಲ ಮಹಡಿಯಲ್ಲಿ ವಿಜ್ಞಾನ, ಇತಿಹಾಸಕ್ಕೆ ಸಂಬಂಧಿಸಿದ ಛಾಯಾಚಿತ್ರ ಪ್ರದರ್ಶನವಿರುತ್ತದೆ.
ನಂತರದ ಹಂತದಲ್ಲಿ ಆಂಪ್ಲಿ ಥಿಯೇಟರ್ ಇರುತ್ತದೆ. ಅಲ್ಲಿಂದ ಮುಂದೆ ಕೇಂದ್ರ ಸರ್ಕಾರದ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಜ್ಞಾನ ಕೇಂದ್ರವಿರುತ್ತದೆ. ಅಲ್ಲಿ ವಿಜ್ಞಾನದ ಪ್ರಯೋಗಗಳನ್ನು ಮಕ್ಕಳಿಗೆ, ಸಾರ್ವಜನಿಕರಿಗೆ ತಿಳಿಸಿಕೊಡುವ ಕಾರ್ಯ ನಡೆಯುತ್ತದೆ ಎಂದು ವಿವರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

