ಶಿವಮೊಗ್ಗ

ಡಿಸಿ ಕಚೇರಿ ಎದುರು ಪ್ರತಿಭಟನೆ

Published On :

ಶಿವಮೊಗ್ಗ: ರಾಜ್ಯ ಸರ್ಕಾರ ಕಡ್ಡಾಯ ಶಿಕ್ಷಣ ಹಕ್ಕು (ಆರ್‌ಟಿಇ) ಕಾಯ್ದೆಯನ್ನು ಸಡಿಲಗೊಳಿಸುತ್ತಿದೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರ ಆರ್‌ಟಿಇ ಕಾಯ್ದೆಯನ್ನು ಜಾರಿಗೆ ತರಲು ಪ್ರಸ್ತುತ ಇರುವ ನಿಯಮಗಳನ್ನು ತಿದ್ದುಪಡಿ ಮಾಡಿ ಶೇ.75ರಷ್ಟು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗರ ಬೇಕೆಂಬುದನ್ನು ಕಡ್ಡಾಯ ಮಾಡಿಲ್ಲ. ಶೇ.25ರಷ್ಟು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿರುವ ಶಾಲೆಯನ್ನೂ ಮೈನಾರಿಟಿ ಕೋಟಾದಲ್ಲಿ ತರಲಾಗಿದೆ. ಸಚಿವ ಸಂಪುಟ ಈ ಸಂಬಂಧ ಕೈಗೊಂಡ ನಿಯಮ ವಿರೋಧಿಸುವುದಾಗಿ ಪ್ರತಿಭಟನಾಕಾರರು ಹೇಳಿದರು.
ಸರ್ಕಾರದ ಈ ನಿಲವಿನಿಂದ ಅಲ್ಪಸಂಖ್ಯಾತ ಆಡಳಿತ ಮಂಡಳಿಗಳ ಶಾಲೆಗಳ ಸಂಖ್ಯೆ 1,059 ರಿಂದ 6,000 ದಾಟಿದೆ. ಇವುಗಳಿಗೆ ಆರ್‌ಟಿಇ ಕಾಯ್ದೆಯಿಂದ ವಿನಾಯಿತಿ ಸಿಗಲಿದೆ. ಇದರಿಂದಾಗಿ ರಾಜ್ಯದ ಹಿಂದುಳಿದ ದಲಿತ ಹಾಗೂ ಬಡ ವಿದ್ಯಾರ್ಥಿಗಳಿಗೆ ದೊರೆಯಬೇಕಿದ್ದ ಸುಮಾರು 40 ಸಾವಿರ ಸೀಟುಗಳು ಆಡಳಿತ ಮಂಡಳಿ ಪಾಲಾಗಲಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರದ ಈ ತೀರ್ಮಾನದಿಂದ ರಾಜ್ಯದ ಬಡ ವಿದ್ಯಾರ್ಥಿಗಳಿಗೆ ಮೋಸವಾಗುತ್ತದೆ. ಪ್ರತಿಯೊಬ್ಬರಿಗೂ ಪ್ರಾಥಮಿಕ ಶಿಕ್ಷಣ ದೊರೆಯಲಿ ಹಾಗೂ ಹಣದ ಕೊರತೆಯಿಂದ ಶಿಕ್ಷಣ ವಂಚಿತರಾಗಬಾರದು ಎಂಬ ಕಾರಣದಿಂದ ಜಾರಿಗೆ ತರಲಾದ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ನಿರರ್ಥಕವಾದಂತಾಗಿದೆ. ಆದ್ದರಿಂದ ರಾಜ್ಯ ಸರ್ಕಾರ ಈ ದಿಸೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಬೇಕು. ಸರ್ಕಾರ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಕೋಟಾ ನಿಯಮದಲ್ಲಿ ಯಾವುದೇ ತಿದ್ದುಪಡಿ ತರಬಾರದು. ಬಡ ವಿದ್ಯಾರ್ಥಿಗಳ ಹಿತ ಕಾಯಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಬಿವಿಪಿ ಪದಾಧಿಕಾರಿಗಳಾದ ದರ್ಶನ್, ಚರಣ್, ಬಾಲಯ್ಯ, ಅಜಯ್, ಶೋಬಿತ್, ಪ್ರವೀಣ್ ಸೇರಿದಂತೆ ಹಲವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.