ಗ್ರಾಮಾಂತರ ಭಾಗಗಳಿಗೆ ಬಸ್ ಸೌಲಭ್ಯ ಒದಗಿಸಿ: ಮಲ್ಲಿಕಾರ್ಜುನ ಹಕ್ರೆ
ಸಾಗರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದವರು ಗ್ರಾಮಾಂತರ ಭಾಗಗಳಿಗೆ ಬಸ್ ಸೌಲಭ್ಯ ಒದಗಿಸಲು ಆದ್ಯತೆ ನೀಡಬೇಕು ಎಂದು ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಹೇಳಿದರು.
ಸಾಗರದಿಂದ ಬಾಳೆಗೆರೆ ಗ್ರಾಮಕ್ಕೆ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆಗೆ ಬಾಳೆಗೆರೆಯಲ್ಲಿ ಹಸಿರು ನಿಶಾನೆ ತೋರಿಸಿ ಮಾತನಾಡಿದ ಅವರು, ಇಂದಿಗೂ ಹಳ್ಳಿಗಳಲ್ಲಿ ಬಸ್ ಸೌಲಭ್ಯಕ್ಕೆ ಮೂರ್ನಾಲ್ಕು ಕಿ.ಮೀ. ನಡೆದೇ ಬರಬೇಕಾದ ಪರಿಸ್ಥಿತಿಯಿದೆ. ಆದರೆ ಈಗ ಗ್ರಾಮೀಣ ರಸ್ತೆಗಳು ಸುಧಾರಿಸಿರುವುದರಿಂದ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯ ಸರ್ಕಾರ ಹಿರಿಯರಿಗೆ, ಅಂಗವಿಕಲರಿಗೆ ಸರ್ಕಾರಿ ಬಸ್ ಪ್ರಯಾಣಕ್ಕೆ ಶೇ.25ರಷ್ಟು ರಿಯಾಯಿತಿ ಘೋಷಿಸಿದೆ. ಅತ್ಯಂತ ಕಡಿಮೆ ವೆಚ್ಚದಲ್ಲಿ ಕೆಎಸ್ಆರ್ಟಿಸಿ ಒದಗಿಸುವ ಬಸ್ ಸೇವೆಯನ್ನು ನಾವು ಜವಾಬ್ದಾರಿಯುತವಾಗಿ ಬಳಸಿಕೊಳ್ಳುವಂತಾಗಬೇಕು ಎಂದು ಅಭಿಪ್ರಾಯಪಟ್ಟರು.
ತಾಪಂ ಸದಸ್ಯ ಮಹಾಬಲೇಶ್ವರ ಕುಗ್ವೆ ಮಾತನಾಡಿದರು. ಯಡಜಿಗಳೇಮನೆ ಗ್ರಾಪಂ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ, ರವಿ ಮೂರ್ಕಟ್ಟೆ, ತಿರುಮಲೇಶ ಮಾಕೋಡು, ಎಂ.ಡಿ.ಮಂಜುಗೌಡರು, ಬಸವರಾಜು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

