ಶಿವಮೊಗ್ಗ

ಪರಿಶೀಲನೆ ಹೀಗಿತ್ತು

Published On :

ಮೆಸ್ಕಾಂ:  ಈ ಹಿಂದೆ ನಾನೂ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕನಾಗಿದ್ದೆ ಎಂದು ಹೇಳುತ್ತಾ, ಸುಧಾರಣೆ ಕ್ರಮಗಳ ಬಗ್ಗೆ ಪ್ರಶ್ನಿಸಿದರು. ವಿದ್ಯುತ್ ಅವಘಡಗಳ ಬಗ್ಗೆ ಮಾಹಿತಿ ಕೇಳಿದರು. ಟ್ರಾನ್ಸ್‌ಫಾರ್ಮರ್‌ಗಳು ಕೆಟ್ಟಾಗ ಬದಲಿಸಲು ರಿಪೇರಿ ಕೇಂದ್ರಗಳಲ್ಲಿ ಎಷ್ಟು ಸಿದ್ಧವಾಗಿಟ್ಟು ಕೊಂಡಿರುತ್ತೀರಿ ಎಂದು ರಾಮಮೂರ್ತಿ ಪ್ರಶ್ನಿಸಿದರು. ಅಧಿಕಾರಿಗಳು 20 ಟ್ರಾನ್ಸ್ ಫಾರ್ಮರ್ ಸಿದ್ಧವಿರುತ್ತವೆ ಎಂದು ಹೇಳಿದರು.
ಆರೋಗ್ಯ ಇಲಾಖೆ: ಆರೋಗ್ಯ ಇಲಾಖೆಯಲ್ಲಿ ಹುದ್ದೆ ಖಾಲಿ ಇರುವ ಬಗ್ಗೆ ಮಾಹಿತಿ ಕೇಳಿದಾಗ, ಒಟ್ಟು 28 ವೈದ್ಯ ಹುದ್ದೆಗಳು ಖಾಲಿ ಇದ್ದು, ಇದರಲ್ಲಿ 11 ಸೊರಬ ತಾಲೂಕಿನಲ್ಲಿಯೇ ಇವೆ. ಖಾಸಗಿ ಆಸ್ಪತ್ರೆ ವೈದ್ಯರ ಸೇವೆಯನ್ನೂ ಪಡೆಯುತ್ತಿರುವುದಾಗಿ ಅವರು ಹೇಳಿದರು. ನಾಯಿ ಕಡಿತ ಹಾಗೂ ಹಾವು ಕಡಿತಕ್ಕೆ ಔಷಧಗಳು ಪ್ರಮುಖ ಅಗತ್ಯವಿದ್ದು, ಎಲ್ಲಾ ಆಸ್ಪತ್ರೆಗಳಲ್ಲಿ ಈ ಔಷಧ ಲಭ್ಯವಾಗುವಂತೆ ಎಚ್ಚರ ವಹಿಸುವಂತೆ ತಿಳಿಸಿದರು.
ಶಿಕ್ಷಣ ಇಲಾಖೆ: ಎಸ್ಸೆಸ್ಸೆಲ್ಸಿಯಲ್ಲಿ ಮುಂದಿನ ಬಾರಿ ಶೇ.90ಕ್ಕಿಂತ ಹೆಚ್ಚು ಫಲಿತಾಂಶ ಪಡೆಯಲು ಏನು ಮಾಡಬೇಕೆಂಬ ಬಗ್ಗೆ ನಿರ್ದಿಷ್ಟ ಕಾರ್ಯಕ್ರಮಗಳನ್ನು ರೂಪಿಸಿ. ಪ.ಪೂ. ಕಾಲೇಜುಗಳ ಫಲಿತಾಂಶವೂ ಹೆಚ್ಚಳ ಆಗಬೇಕು ಎಂದರು. ವಿಜ್ಞಾನ ಪದವಿಗೆ ಕಡಿಮೆ ವಿದ್ಯಾರ್ಥಿಗಳು ಸೇರ್ಪಡೆಯಾಗುತ್ತಿರುವುದಕ್ಕೆ ಆತಂಕ ವ್ಯಕ್ತಪಡಿಸಿದ ಅವರು, ಈ ಬಗ್ಗೆ ಜಾಗೃತಿ ಮೂಡಿಸುವಂತೆ ಸೂಚಿಸಿದರು.
ಕೃಷಿ: ಬೀಜ ಹಾಗೂ ಗೊಬ್ಬರ ಮಾರಾಟಕ್ಕೆ ಸಂಬಂಧಿಸಿದಂತೆ ಯಾರ ವಿರುದ್ಧವಾದರೂ ಒಮ್ಮೆ ದೂರು ದಾಖಲಾದರೆ ಮತ್ತೆ ಅವರ ವಿರುದ್ಧ ದೂರು ದಾಖಲಾಗುವುದಿಲ್ಲ ಏಕೆ, ಬೇಕೆಂದೇ ಕೈಬಿಡಲಾಗುತ್ತಿದೆಯೇ ಎಂದು ಪ್ರಶ್ನಿಸಿದ ಅವರು, ವಿವಿಧ ಯೋಜನೆಗಳಲ್ಲಿ ಒಬ್ಬರೇ ಫಲಾನುಭವಿಗಳಿಗೆ ಹಲವು ಸವಲತ್ತು ನೀಡುತ್ತಿರುವುದು ಗಮನಕ್ಕೆ ಬಂದಿದೆ. ಎಲ್ಲಾ ಯೋಜನೆಗಳ ಫಲಾನುಭವಿ ಪಟ್ಟಿ ಕೊಡಿ ಎಂದರು.
ಪರಿಶಿಷ್ಟರ ಇಲಾಖೆ: ಹಾಸ್ಟೆಲ್ ನಿರ್ಮಾಣ, ನಿರ್ವಹಣೆ ಸಮಸ್ಯೆಗಳನ್ನು ಆಲಿಸಿದರು. ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ಅಭಿವೃದ್ಧಿಗೆ ಅನುದಾನ ಸಿಗುತ್ತದೆ. ಆದರೆ ಬಿಸಿಎಂ ಇಲಾಖೆ ಹಾಸ್ಟೆಲ್ ಗಳ ರಿಪೇರಿಗೂ ಹಣ ಸಿಗದಿರುವುದನ್ನು ಅಧಿಕಾರಿಗಳು ಉಸ್ತುವಾರಿ ಕಾರ್ಯದರ್ಶಿಗಳ ಗಮನಕ್ಕೆ ತಂದರು.
ಸಾರಿಗೆ: ಜಿಲ್ಲೆಯ ವಿವಿಧ ಶಾಲೆಗಳಿಗೆ ಆಟೋರಿಕ್ಷಾದಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗುವ ಬಗ್ಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕ್ರಮ ಏನು ಎಂದು ಪ್ರಶ್ನಿಸಿದ ಅವರು, ಜಿಲ್ಲೆಯಲ್ಲಿ ಶಾಲಾ ವಾಹನಗಳ ಸಂಖ್ಯೆ ಎಷ್ಟು, ವಾಹನಗಳು ಸುಸ್ಥಿತಿಯಲ್ಲಿವೆಯೇ ಎಂಬ ಬಗ್ಗೆ ಗಮನ ಹರಿಸಬೇಕು ಎಂದು ಸೂಚಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.