ಪದವಿ ಪರೀಕ್ಷಾ ದಿನಾಂಕ ಮುಂದೂಡಿಕೆ
ಶಿವಮೊಗ್ಗ: ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಅರ್ಹತೆಯ ರಾಜ್ಯಮಟ್ಟದ ಟಿ.ಇ.ಟಿ. ಪರೀಕ್ಷೆಯನ್ನು ಜೂನ್ 22ರಂದು ನಡೆಸುತ್ತಿರುವ ಹಿನ್ನೆಲೆಯಲ್ಲಿ ಸದರಿ ದಿನಾಂಕದಂದು ನಡೆಯಬೇಕಿದ್ದ ಕುವೆಂಪು ವಿಶ್ವವಿದ್ಯಾನಿಲಯದ ರೆಗ್ಯುಲರ್ ಸ್ನಾತಕ ಪದವಿಯ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಜೂನ್ 27ರಂದು ನಡೆಸಲಾಗುವುದು.
ಉಳಿದಂತೆ ಪರೀಕ್ಷಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಕುವೆಂಪು ವಿಶ್ವವಿದ್ಯಾನಿಲಯ ರಿಜಿಸ್ಟ್ರಾರ್ ಪ್ರೊ. ಎಚ್.ಎಸ್. ಭೋಜ್ಯಾನಾಯ್ಕ ತಿಳಿಸಿದ್ದಾರೆ.
ಕಾನ್ಸ್ಟೇಬಲ್ ಹುದ್ದೆ: ಪರೀಕ್ಷೆಗೆ ತರಬೇತಿ
ಶಿವಮೊಗ್ಗ: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ವತಿಯಿಂದ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ನಡೆಯಲಿರುವ ಲಿಖಿತ ಪರೀಕ್ಷೆಗೆ 45 ದಿನಗಳ ವಿಶೇಷ ತರಬೇತಿ ಶಿಬಿರ ಏರ್ಪಡಿಸಲಾಗಿದೆ.
ತರಬೇತಿ ಕರ್ನಾಟಕ ಸರ್ಕಾರ ಸದ್ಯದಲ್ಲಿಯೇ ನಡೆಸಲಿರುವ ಪೊಲೀಸ್ ಸಬ್ಇನ್ಸ್ಪೆಕ್ಟರ್ ಪರೀಕ್ಷೆಗೂ ಅನುಕೂಲವಾಗುತ್ತದೆ. ಆಸಕ್ತರು ಜೂನ್ 27ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆವರೆಗೆ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಕಚೇರಿ, ಮೈಸೂರು ಇಲ್ಲಿ (ದೂ.ಸಂ. 0821 2515944) ಸಂಪರ್ಕಿಸುವಂತೆ ಪ್ರಾದೇಶಿಕ ನಿರ್ದೇಶಕರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

