ಶಾಸಕರ ವಿರುದ್ಧ ಹೋರಾಟ: ಬಿಜೆಪಿ ಸ್ಲಂ ಮೋರ್ಚಾ ಎಚ್ಚರಿಕೆ
ಶಿವಮೊಗ್ಗ: ಸ್ಲಂ ನಿವಾಸಿಗಳ ಮೂಲಭೂತ ಸೌಕರ್ಯ ಹಾಗೂ ಹಕ್ಕುಪತ್ರಗಳನ್ನು ನೀಡುವ ಬಗ್ಗೆ ಶಾಸಕ ಕೆ.ಬಿ. ಪ್ರಸನ್ನಕುಮಾರ್ ನಗರಸಭೆ, ವಿಧಾನಸಭೆಯಲ್ಲಿ ಪ್ರಸ್ತಾಪಿಸಿಲ್ಲ ಎಂದು ಬಿಜೆಪಿ ಸ್ಲಂ ಮೋರ್ಚಾ ಆರೋಪಿಸಿದ್ದು, ಸ್ಲಂಗಳಿಗೆ ಭೇಟಿ ನೀಡಿ ಸಮಸ್ಯೆ ಬಗೆಹರಿಸದಿದ್ದರೆ ಅವರ ವಿರುದ್ಧ ಹೋರಾಟ ಹಮ್ಮಿಕೊಳ್ಳ ಬೇಕಾಗುತ್ತದೆ ಎಂದು ಎಚ್ಚರಿಸಿದೆ.
ನಗರದಲ್ಲಿ ಬುಧವಾರ ನಡೆದ ಸ್ಲಂ ಮೋರ್ಚಾ ಸಭೆಯಲ್ಲಿ ಈ ಕುರಿತು ನಿರ್ಣಯ ಅಂಗೀಕರಿಸಿದ್ದು, ಶಿವಮೊಗ್ಗ ಕ್ಷೇತ್ರ ಶಾಸಕರಾಗಿ ಆಯ್ಕೆಯಾಗಿ ವರ್ಷವಾದರೂ ನಗರದ ಯಾವುದೇ ಸ್ಲಂಗಳಿಗೆ ಭೇಟಿ ನೀಡಿರುವುದಿಲ್ಲ. ಶಾಸಕರಾಗಿ ಆಯ್ಕೆಯಾದ ಹೊಸದರಲ್ಲಿ ಇನ್ನೂ 6 ತಿಂಗಳಿನಲ್ಲಿ ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸುತ್ತೇನೆ ಎಂದಿದ್ದರು. ಆದರೆ ಹಕ್ಕು ಪತ್ರ ವಿತರಿಸುವುದಾಗಲೀ, ಆ ಬಗ್ಗೆ ಯಾವುದೇ ರೀತಿಯ ಪ್ರಯತ್ನಗಳಾಗಲಿ ಮಾಡಿಲ್ಲ. ಅಲ್ಲದೆ ಸ್ಲಂ ನಿವಾಸಿಗಳ ಮೂಲಭೂತ ಸೌಕರ್ಯ ಸಮಸ್ಯೆಗಳನ್ನು ತಿಳಿದುಕೊಳ್ಳುವ ತುಡಿತವೂ ಶಾಸಕರಿಗೆ ಇಲ್ಲ ಎಂದು ಮೋರ್ಚಾ ಹೇಳಿದೆ.
ಶಾಸಕರಾಗಿದ್ದ ಕೆ.ಎಸ್.ಈಶ್ವರಪ್ಪ ಸುಮಾರು 6,000 ದಷ್ಟು ಹಕ್ಕು ಪತ್ರಗಳನ್ನು ನೀಡಿದ್ದರು. ತಾಂತ್ರಿಕ ದೋಷಗಳಿಂದ ಇನ್ನೂ 7,000 ಹಕ್ಕುಪತ್ರಗಳನ್ನು ನೀಡಲು ಸಾಧ್ಯವಾಗಲಿಲ್ಲ. ಆದರೆ, ಶಾಸಕ ಪ್ರಸನ್ನಕುಮಾರ್ ಅತ್ಯಂತ ಕೆಳವರ್ಗದ ಸ್ಲಂ ನಿವಾಸಿಗಳ ಬಗ್ಗೆ ಸ್ವಲ್ಪವೂ ಚಿಂತಿಸದೆ ದಿನ ಕಳೆಯುತ್ತಿದ್ದಾರೆ ಎಂದು ಸ್ಲಂಮೋರ್ಚಾ ಜಿಲ್ಲಾಧ್ಯಕ್ಷ ಎಚ್. ಶಶಿಧರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

