ಪರ್ಯಾಯ ಮಾರ್ಗದಲ್ಲಿ ಚರಂಡಿ ನಿರ್ಮಿಸಿ
ಶಿವಮೊಗ್ಗ: ಪರ್ಯಾಯ ಮಾರ್ಗದಲ್ಲಿ ಚರಂಡಿ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ 2ನೇ ವಾರ್ಡ್‌ನ ಬಸವೇಶ್ವರ ನಗರದ ನಿವಾಸಿಗಳು ಮುಖಂಡ ಬಳ್ಳೇಕೆರೆ ಸಂತೋಷ್ ನೇತೃತ್ವದಲ್ಲಿ ನಗರಾಭಿವೃದ್ಧಿ ಕೋಶದ ಜಿಲ್ಲಾ ಯೋಜನಾಧಿಕಾರಿ ರಾಜಪ್ಪ ರವರಿಗೆ ಮನವಿ ಸಲ್ಲಿಸಿದರು.
1ನೇ ವಾರ್ಡ್ ಬೊಮ್ಮನಕಟ್ಟೆಯಿಂದ ಬರುವ ಚರಂಡಿ ನೀರನ್ನು ಬಸವೇಶ್ವರ ನಗರ 3ನೇ ಕ್ರಾಸ್‌ನಲ್ಲಿ ಚರಂಡಿ ನಿರ್ಮಿಸಿ, ಅಲ್ಲಿಂದ ಮುಂದೆ ಹರಿಯುವಂತೆ ಮಾಡಲು ಮಹಾನಗರ ಪಾಲಿಕೆ ಆಡಳಿತ ಮುಂದಾಗಿದೆ. ಇದರಿಂದ ಸ್ಥಳೀಯ ನಿವಾಸಿಗಳಿಗೆ ಸಾಕಷ್ಟು ತೊಂದರೆಯಾಗುವ ಸಾಧ್ಯತೆ ಇದೆ ಎಂದು ನಿವಾಸಿಗಳು ಆತಂಕ ವ್ಯಕ್ತಪಡಿಸಿದರು. ಈಗಾಗಲೇ ಮಹಾನಗರ ಪಾಲಿಕೆ ಆಡಳಿತ ರು. 6 ಲಕ್ಷ ವೆಚ್ಚದಲ್ಲಿ ಹೊಸದಾಗಿ ಚರಂಡಿ ನಿರ್ಮಾಣಕ್ಕೆ ಮುಂದಾಗಿದೆ. ಈ ಕಾಮಗಾರಿ ಆರಂಭಿಸದಂತೆ ಸೂಕ್ತ ನಿರ್ದೇಶನ ಮಹಾನಗರ ಪಾಲಿಕೆ ಆಡಳಿತಕ್ಕೆ ನೀಡಬೇಕು ಎಂದು ನಿವಾಸಿಗಳು ಮನವಿ ಮಾಡಿದರು. ಬಳ್ಳೆಕೆರೆ ಸಂತೋಷ್ ಮಾತನಾಡಿದರು.
1ನೇ ವಾರ್ಡ್‌ನಲ್ಲಿಯೇ ಚರಂಡಿ ನಿರ್ಮಿಸಿ ಕೊಳಚೆ ನೀರು ಹರಿದು ಹೋಗಲು ಸೂಕ್ತ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಬಸವೇಶ್ವರ ನಗರ 3ನೇ ತಿರುವಿನಲ್ಲಿ ಹೊಸ ಚರಂಡಿ ನಿರ್ಮಿಸಿ ಕೊಳಚೆ ನೀರು ಹರಿದುಹೋಗುವ ವ್ಯವಸ್ಥೆ ಮಾಡಬಾರದು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ನಿವಾಸಿಗಳ ಅಹವಾಲು ಆಲಿಸಿದ ರಾಜಪ್ಪರವರು ಸ್ಥಳದಲ್ಲಿ ಉಪಸ್ಥಿತರಿದ್ದ ಮಹಾನಗರ ಪಾಲಿಕೆ ಆಯುಕ್ತ ಮೂಕಪ್ಪ ಕರಭೀಮಣ್ಣವರ್, ಮುಖ್ಯ ಎಂಜಿನಿಯರ್ ಗಣೇಶ್ ಅವರಿಗೆ ಈ ನಿಟ್ಟಿನಲ್ಲಿ ಚರ್ಚಿಸಿ ಸೂಕ್ತ ಕ್ರಮಕೈಗೊಳ್ಳುವಂತೆ ಸೂಚಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

