ಶಿವಮೊಗ್ಗ

ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಶುಲ್ಕ ಹೆಚ್ಚು'ವರಿ': ಪ್ರತಿಭಟನೆ

Published On :

ಶಿವಮೊಗ್ಗ:  ನಗರದ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಂದ ಹೆಚ್ಚಿನ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಶುಕ್ರವಾರ ಎನ್‌ಎಸ್‌ಯುಐ ಸದಸ್ಯರು ಆಚಾರ್ಯ ತುಳಸಿ ನ್ಯಾಷನಲ್ ಕಾಮರ್ಸ್ ಕಾಲೇಜು ಎದುರು ಕುರಿಗಳ ಸಮೇತ ಪ್ರತಿಭಟನೆ ನಡೆಸಿದರು.
ನೀವು ಕೇಳಿದಷ್ಟು ಶುಲ್ಕ ಕೊಡಲು ವಿದ್ಯಾರ್ಥಿಗಳು ಕುರಿಗಳಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು ಪದವಿ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರು ಸ್ಥಳಕ್ಕೆ ಆಗಮಿಸಬೇಕೆಂದು ಪಟ್ಟು ಹಿಡಿದರು. ಸಂಜೆಯವರೆಗೂ ಸ್ಥಳಕ್ಕೆ ಆಗಮಿಸದ ಕಾರಣ ಶನಿವಾರವೂ ಪ್ರತಿಭಟನೆ ಮುಂದುವರಿಸಲು ನಿರ್ಧರಿಸಿದ್ದಾರೆಈ ರೀತಿ ಶುಲ್ಕ ವಸೂಲಿ ಮಾಡುತ್ತಿರುವುದು ಕಾನೂನು ಬಾಹಿರವಾಗಿದ್ದು, ಸಂಗ್ರಹಿಸುತ್ತಿರುವ ಹೆಚ್ಚುವರಿ ಶುಲ್ಕ ರದ್ಧತಿಗೆ ಕ್ರಮಕೈಗೊಳ್ಳಬೇಕು. ಈಗಾಗಲೇ ವಿದ್ಯಾರ್ಥಿಗಳಿಂದ ಹೆಚ್ಚುವರಿಯಾಗಿ ಸಂಗ್ರಹಿಸಿರುವ ಶುಲ್ಕವನ್ನು ಹಿಂತಿರುಗಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಸಿದರು.ಪ್ರತಿಭಟನೆಯಲ್ಲಿ ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಜಿ. ಮಧುಸೂದನ್, ಕೆ. ಚೇತನ್, ಶ್ರೀಜಿತ್, ಸಂತೋಷ್, ಬಾಲಾಜಿ, ಮಹೇಂದ್ರ ಸೇರಿದಂತೆ ಹಲವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.