ಶಿವಮೊಗ್ಗ

ನರಸಿಂಹರಾಜಪುರ: ಜ್ವಾಲಾಮಾಲಿನಿ ಜೇಸಿ ಯೋಗ ಶಿಬಿರ ಉದ್ಘಾಟನೆ

Published On :

ನರಸಿಂಹರಾಜಪುರ: ಇತ್ತೀಚಿನ ವರ್ಷಗಳಲ್ಲಿ ಜನತೆ ಒತ್ತಡದ ಬದುಕಿನಲ್ಲಿ ಜೀವನ ಮಾಡುತ್ತಿದ್ದು, ಆಹಾರ ಮತ್ತು ನಿದ್ರೆಯ ಬಗ್ಗೆಯೂ ಗಮನ ನೀಡುತ್ತಿಲ್ಲ ಎಂದು  ಹಾರ್ಟ್ ಆಫ್ ಲಿವಿಂಗ್‌ನ ವ್ಯಕ್ತಿ ವಿಕಸನ ಕೇಂದ್ರದ ಸದಸ್ಯ ಶಾಂತಿಭೂಷಣ್ ತಿಳಿಸಿದರು. ಅವರು ಗುರುಭವನದಲ್ಲಿ ಜ್ವಾಲಾಮಾಲಿನಿ ಜೇಸಿ ಸಂಸ್ಥೆ, ಹಾರ್ಟ್ ಆಫ್ ಲಿವಿಂಗ್ ವ್ಯಕ್ತಿ ವಿಕಸನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಒಂದು ವಾರದ ಯೋಗ ಶಿಬಿರ ಉದ್ಘಾಟಿಸಿ ಮಾತನಾಡಿದರು. ಯೋಗದಿಂದ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುತ್ತದೆ. ಪ್ರತಿ ದಿನ ಅರ್ದ ಘಂಟೆ ಯೋಗ ಮಾಡುವುದರಿಂದ ದಿನದ ಇನ್ನುಳಿದ ಸಮಯ ಉತ್ಸಾಹದಿಂದ ಇರಬಹುದಾಗಿದೆ. ರವಿಶಂಕರ್ ಗುರೂಜಿಯವರು ಧ್ಯಾನ ಮತ್ತು ಪ್ರಾಣಾಯಾಮಕ್ಕೆ ಸಂಬಂಧಿಸಿದಂತೆ ಹಲವು ಆಯಾಮಗಳಲ್ಲಿ ಅಧ್ಯಯನ ಮಾಡಿ ಜನರಿಗೆ ತರಬೇತಿ ನೀಡುತ್ತಿದ್ದಾರೆ ಎಂದು ಹೇಳಿದರು.  ಅಧ್ಯಕ್ಷತೆ ವಹಿಸಿದ್ದ ಜ್ವಾಲಾಮಾಲಿನಿ ಜೇಸಿ ಸಂಸ್ಥೆ ಅಧ್ಯಕ್ಷ ಅಕ್ಷತ್ ಮಾತನಾಡಿ, ಯುವಜನತೆ ತಮ್ಮ ಆರೋಗ್ಯದ ಕಡೆ ಗಮನ ನೀಡುತ್ತಿಲ್ಲ. ಹಲವು ದುಶ್ಚಟಗಳಿಗೆ ಬಲಿಯಾಗಿ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದು, ಚಿಕ್ಕವಯಸ್ಸಿನಲ್ಲೇ ಅನಾರೋಗ್ಯಪೀಡಿತರಾಗಿ ಮರಣ ಹೊಂದುತ್ತಿರುವ ಸಂಖ್ಯೆ ಹೆಚ್ಚುತ್ತಿದೆ. ಆತ್ಮವಿಶ್ವಾಸದ ಕೊರತೆ, ಮಾನಸಿಕ ಖಿನ್ನತೆಗೆ ಒಳಗಾಗುವ ಯುವ ಜನರು ಯೋಗ, ಧ್ಯಾನವನ್ನು ಮಾಡಿ ಪರಿಹಾರ ಕಂಡುಕೊಳ್ಳಬಹುದು ಎಂದು ನುಡಿದರು. ಜ್ವಾಲಾಮಾಲಿನಿ ಜೇಸಿ ಸಂಸ್ಥೆ ನಿಕಟಪೂರ್ವ ಅದ್ಯಕ್ಷ ಪಿ.ಪ್ರಭಾಕರ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.