ಕಿರುಕುಳ; ವರ್ತಕ ನೇಣಿಗೆ ಶರಣು
ಸೊರಬ: ವರ್ತಕರೊಬ್ಬರು ಕುಟುಂಬ ಸದಸ್ಯರ ಕಿರುಕುಳ ತಾಳಲಾರದೆ ನೇಣು ಹಾಕಿಕೊಂಡ ಘಟನೆ ಆನವಟ್ಟಿ ಯಲ್ಲಿ ನಡೆದಿದೆ. ಆನವಟ್ಟಿ ನೆಹರು ನಗರ ನಿವಾಸಿ ಜಾಕೀರ್ಸಾಬ್ (51) ಆತ್ಮಹತ್ಯೆ ಮಾಡಿಕೊಂಡವರು. ನನ್ನ ಅಜ್ಜ, ಅಜ್ಜಿ, ಮೊದಲ ಪತ್ನಿ, ಚಿಕ್ಕಮ್ಮ, ಅತ್ತೆ ಇತರರು ನಿತ್ಯ ಕಿರುಕುಳು ನೀಡುತ್ತಿದ್ದು, ಇದರಿಂದ ತಮ್ಮ ತಂದೆ ಬೇಸರಗೊಂಡು ನೇಣಿಗೆ ಶರಣಾಗಿದ್ದಾರೆ ಎಂದು ಆನವಟ್ಟಿ ಠಾಣೆಗೆ ಮೃತ ಜಾಕೀರ್ಸಾಬ್ ಪುತ್ರಿ ರೋಷನಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ರವಿಶಂಕರ್ ನಿಧನ
ಹೊಸನಗರ: ತಾಲೂಕಿನ ನಗರ ಹೋಬಳಿ ಜೆಡಿಎಸ್ ಅಧ್ಯಕ್ಷ ರವಿಶಂಕರ್ ಮಂಗಳವಾರ ಬೆಳಗ್ಗೆ ನಿಧನರಾದರು. ಅವರಿಗೆ 46 ವರ್ಷವಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನೂಲಿಗ್ಗೇರಿಯ ಅವರ ಮನೆಯ ಹಿಂಭಾಗದಲ್ಲಿ ಸಂಜೆ ಅಂತ್ಯಕ್ರಿಯೆ ನಡೆಸಲಾಯಿತು. ಜೆಡಿಎಸ್ ಪ್ರಮುಖರು ಸೇರಿದಂತೆ ಸುತ್ತಮುತ್ತಲಿನ ಗಣ್ಯರು ಅಂತಿಮ ದರ್ಶನ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

