ಶಿವಮೊಗ್ಗ

ಕೃತಿ ನಿಷೇಧಕ್ಕೆ ಒತ್ತಾಯಿಸಿ ಪ್ರಕರಣ ದಾಖಲು

Published On :

ಸಾಗರ: ದೇವರ ಮೂರ್ತಿ ಮೇಲೆ ಮೂತ್ರ ವಿಸರ್ಜನೆ ಮಾಡಿದರೆ ತಪ್ಪಲ್ಲ ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿರುವ ಸಾಹಿತಿಗಳಾದ ಡಾ.ಯು.ಆರ್.ಅನಂತಮೂರ್ತಿ ಹಾಗೂ ಎಂ.ಎಂ.ಕಲಬುರ್ಗಿ ಅವರ ಮೇಲೆ ಸಾಗರ ವಿಶ್ವಹಿಂದೂ ಪರಿಷತ್ ಮುಖಂಡ ರಾಘವೇಂದ್ರ ಭಟ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಡಾ. ಯು.ಆರ್. ಅನಂತಮೂರ್ತಿ ಅವರ 'ಬೆತ್ತಲೆಸೇವೆ ಏಕೆ ಕೂಡದು' ಎಂಬ ಕೃತಿ ಆಧರಿಸಿ ಎಂ.ಎಂ.ಕಲಬುರ್ಗಿ ಅವರು ನೀಡಿರುವ ಹೇಳಿಕೆ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ್ದು, ಭಾರತೀಯ ದಂಡ ಸಂಹಿತೆ ಸೆಕ್ಷನ್ 295 ಎ, 298ರ ಅಡಿಯಲ್ಲಿ ಕೃತಿಯನ್ನು ನಿಷೇಧಿಸುವಂತೆ ಅವರು ನ್ಯಾಯಾಲಯವನ್ನು ಕೋರಿದ್ದಾರೆ.
ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಪ್ರಕಾಶ್ ಅವರು ಖಾಸಗಿ ಫಿರ್ಯಾದು ದಾಖಲಿಸಿಕೊಂಡು ಜೂ.30ರಂದು ವಿಚಾರಣೆ ದಿನಾಂಕವನ್ನು ನಿಗಧಿ ಮಾಡಿ ಆದೇಶ ಹೊರಡಿಸಿದ್ದಾರೆ.
ಮೂವರ ಬಂಧನ
ಸಾಗರ: ತಾಲೂಕಿನ ಕೆರೋಡಿ ಗ್ರಾಮದ ವಿಶ್ವನಾಥ್ ಎಂಬವರ ಮನೆ ಮೇಲೆ ದಾಳಿ ನಡೆಸಿದ ಗ್ರಾಮಾಂತರ ಠಾಣೆ ಪೊಲೀಸರು ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಮೂವರನ್ನು ಅಮಚಿ, ಪಡವಗೋಡು ಗ್ರಾಮಗಳ ಕೃಷ್ಣಮೂರ್ತಿ, ಶ್ರೀಕಾಂತ್, ಕುಮಾರನನ್ನು ವಶ ಪಡೆದಿದ್ದಾರೆ. ಇನ್ನಿಬ್ಬರು ತಪ್ಪಿಸಿಕೊಂಡಿದ್ದಾರೆ. ಮಂಗಳವಾರ ರಾತ್ರಿ ದಾಳಿ ನಡೆಸಿ 930 ನಗದು, 3 ನೊಕಿಯಾ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.