ಶಿವಮೊಗ್ಗ: ನಗರದ ಸಾಗರ ರಸ್ತೆಯಲ್ಲಿರುವ ಡಿಎಆರ್ ಕಚೇರಿ ಸಭಾಂಗಣದಲ್ಲಿ ಜೂನ್ 29ರಂದು ಬೆಳಗ್ಗೆ 11.30ಕ್ಕೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದುಕೊರತೆ ಸಭೆ ಆಯೋಜಿಸಲಾಗಿದೆ. ಸಭೆಗೆ ಜಿಲ್ಲೆಯ ಯಾವುದೇ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಪೊಲೀಸ್ ಇಲಾಖೆಗೆ ಸಂಬಂಧಿಸಿದ್ದಾಗಲೀ, ಸಾಮೂಹಿಕವಾದ ಸಮಸ್ಯೆಗಳ ಬಗ್ಗೆಯಾಗಲಿ, ಇನ್ನಿತರೆ ಯಾವುದೇ ವಿಚಾರಗಳಿದ್ದಲ್ಲಿ ಅಂತಹವುಗಳನ್ನು ತಿಳಿಸುವಂತೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.