ಶಿವಮೊಗ್ಗ

ಬಿಇಒ ಕಚೇರಿ ಭ್ರಷ್ಚಾಚಾರ ಖಂಡಿಸಿ ಬಿಜೆಪಿ ಪ್ರತಿಭಟನೆ

Published On :

ಕನ್ನಡಪ್ರಭ ವಾರ್ತೆ, ಸಾಗರ, ಜೂ.26
ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ತಾಲೂಕು ಬಿಜೆಪಿ ವತಿಯಿಂದ ಗುರುವಾರ ಶಿಕ್ಷಣಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಮುಖಂಡ ಟಿ.ಡಿ. ಮೇಘರಾಜ್ ಮಾತನಾಡಿ, ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಶಿಕ್ಷಕರ ಡೆಪ್ಯುಟೇಶನ್ಗೆ ಸಂಬಂಧಪಟ್ಟಂತೆ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಯುತ್ತಿದೆ. ಹಣವಿಲ್ಲದ ಶಿಕ್ಷಕರು ಡೆಪ್ಯುಟೇಶನ್ ಮಾಡಿಸಿಕೊಳ್ಳಲು ಸಾಧ್ಯವೆ ಇಲ್ಲ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಪ್ರತಿಯೊಂದು ಕೆಲಸಕ್ಕೆ ಇಂತಿಷ್ಟು ಹಣವೆಂದು ನಿಗದಿಗೊಳಿಸಲಾಗಿದೆ. ಅನೇಕ ಶಿಕ್ಷಕರು ಕೆಜೆಎಡಿ ಸಾಲ ತೆಗೆದುಕೊಳ್ಳದಿದ್ದರೂ ಅವರ ಸಂಬಳದಲ್ಲಿ ಹಣ ಕಡಿತಗೊಳಿಸಲಾಗುತ್ತಿದೆ. ಒಟ್ಟಾರೆ ಶಿಕ್ಷಣ ಇಲಾಖೆಯಿಂದಲೆ ಶಿಕ್ಷಕರ ಶೋಷಣೆ ನಡೆಯುತ್ತಿದೆ ಎಂದು ಆರೋಪಿಸಿದರು.ತಾಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ಸಾಕಷ್ಟು ಶಿಕ್ಷಕರ ಕೊರತೆ ಇದೆ. ಶಿಕ್ಷಣ ಸಚಿವರು ನಮ್ಮ ಜಿಲ್ಲೆಯವರೆ ಆಗಿದ್ದರೂ, ಶಿಕ್ಷಕ ಹುದ್ದೆ ಭರ್ತಿ ಮಾಡುವ ಹಾಗೂ ಇಲಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ ತಡೆಗಟ್ಟುವ ನಿಟ್ಟಿನಲ್ಲಿ ಯಾವುದೆ ಕ್ರಮ ಕೈಗೊಂಡಿಲ್ಲ. ಕ್ಷೇತ್ರದ ಶಾಸಕ ಕಾಗೋಡು ತಿಮ್ಮಪ್ಪ ಅವರು ಪಾರದರ್ಶಕ ಆಡಳಿತದ ಪಾಠ ಹೇಳುತ್ತಾರೆ. ಆದರೆ, ಶಿಕ್ಷಣ ಇಲಾಖೆಯಲ್ಲಿಯೆ ಶಿಕ್ಷಕರಿಗೆ ವಂಚನೆ ನಡೆಯುತ್ತಿದ್ದರೂ ಕ್ರಮ ತೆಗೆದುಕೊಳ್ಳದೆ ಇರುವುದು ಖಂಡನೀಯ. ಶಿಕ್ಷಕರ ಹುದ್ದೆ ತಕ್ಷಣ ಭರ್ತಿ ಮಾಡದೆ ಹೋದರೆ ಶಿಕ್ಷಣ ಸಚಿವರು ಭಾಗವಹಿಸುವ ಕಾರ್ಯಕ್ರಮಗಳಲ್ಲಿ ಅವರಿಗೆ ಘೇರಾವ್ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬಿಜೆಪಿ ತಾ. ಅಧ್ಯಕ್ಷ ಚೇತನರಾಜ್ ಮಾತನಾಡಿ, ಶಿಕ್ಷಣ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಕುರಿತು ಸಮಗ್ರ ತನಿಖೆ ನಡೆಸಬೇಕು. ಇಲ್ಲವಾದರೆ ಬಿಜೆಪಿ ವತಿಯಿಂದ ಇನ್ನಷ್ಟು ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಸ್ಥಳಕ್ಕೆ ಆಗಮಿಸಿದ ಶಿಕ್ಷಣಾಧಿಕಾರಿ ಪಿ. ಲಿಂಗಪ್ಪ, ಸಮಯಮಿತಿಯೊಳಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.  ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಯು.ಎಚ್. ರಾಮಪ್ಪ, ಪ್ರಮುಖರಾದ ಸತೀಶಬಾಬು, ವ.ಶಂ. ರಾಮಚಂದ್ರ ಭಟ್, ರಾಜು ಮಡಿವಾಳ, ಎಲ್.ವಿ. ಅಕ್ಷರ, ಗಣೇಶ ಗಟ್ಟಿ, ಸಂತೋಷ್, ಶ್ರೀನಿವಾಸ್ ಮೇಸ್ತ್ರಿ, ಸಿ.ಅರವಿಂದ್, ಗಂಗಮ್ಮ, ಲಕ್ಷ್ಮೀರಾಜು, ಕಸ್ತೂರಿ ನಾಗರಾಜ್, ವಿಜಯಕುಮಾರ್, ಕೃಷ್ಣಮೂರ್ತಿ ಭಂಡಾರಿ, ಸಿ.ಜಿ. ಮಂಜಪ್ಪ, ಪಡವಗೋಡು ಬಂಗಾರಪ್ಪ, ಕೃಷ್ಣಮೂರ್ತಿ ಹೊಸಂತೆ, ಸುನೀಲ್ ರೋನಾಲ್ಡೋ, ಪ್ರಸನ್ನ ಕೆರೆಕೈ, ಹರ್ಷ ಇತರರು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.