ಶಿವಮೊಗ್ಗ

ಗ್ರಾಪಂ ಅಧ್ಯಕ್ಷೆ ವಿರುದ್ಧ ಅವಿಶ್ವಾಸ

Published On :

ಹೊಸನಗರ:  3 ಬಾರಿ ರಾಷ್ಟ್ರ ಪ್ರಶಸ್ತಿಗೆ ಭಾಜನವಾದ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ನೆಲ್ಲುಂಡೆ ಲಲಿತಾ ಅವರು ಸರ್ವಾಧಿಕಾರಿ ಧೋರಣೆ ಮತ್ತು ಸದಸ್ಯರ ಕಡೆಗಣನೆ ಮಾಡುತ್ತಿದ್ದಾರೆ ಎಂದು ಆರೋಪಿಸಿ 9 ಗ್ರಾಪಂ ಸದಸ್ಯರು ಅಧ್ಯಕ್ಷೆ ನೆಲ್ಲುಂಡೆ ಲಲಿತಾ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಮುಂದಾಗಿದ್ದಾರೆ. ಶನಿವಾರ ಸಂಜೆ ಸಾಗರ ವಿಭಾಗಾಧಿಕಾರಿ ಡಾ.ಉದಯಕುಮಾರ್ ಶೆಟ್ಟಿ ಅವರನ್ನು ಭೇಟಿ ಮಾಡಿದ ಸದಸ್ಯರು ಅಧ್ಯಕ್ಷರ ವಿರುದ್ಧದ ತಮ್ಮ ಅವಿಶ್ವಾಸ ಪತ್ರವನ್ನು ನೀಡಿದ್ದಾರೆ. ಒಟ್ಟು 11 ಸದಸ್ಯ ಬಲದ ಮೇಲಿನ ಬೇಸಿಗೆ ಗ್ರಾಮ ಪಂಚಾಯತಿಯಲ್ಲಿ 9 ಗ್ರಾಪಂ ಸದಸ್ಯರು ಅಧ್ಯಕ್ಷೆ ಲಲಿತಾ ಕರ್ತವ್ಯದ ಬಗ್ಗೆ ಬೇಸತ್ತು ಅವಿಶ್ವಾಸ ನಿರ್ಣಯ ಮಂಡನೆಗೆ ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ. ಅವಿಶ್ವಾಸ ಪತ್ರ ಪಡೆದ ವಿಭಾಗಾಧಿಕಾರಿ ಡಾ.ಉದಯಕುಮಾರ್ ಶೆಟ್ಟಿ, 1 ತಿಂಗಳ ಕಾಲಾವಧಿಯೊಳಗೆ ಸದಸ್ಯರ ಸಭೆ ಕರೆದು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಸದಸ್ಯ ಶುಭಕರ್ ಪೂಜಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.