ಶಿವಮೊಗ್ಗ

ಅಪಘಾತ ನಿರ್ಮೂಲನೆ; ಕಾರ್ಯಾಗಾರ

Published On :

ಭದ್ರಾವತಿ:  ನ್ಯಾಷನಲ್ ಸೇಫ್ಟಿ ಕೌನ್ಸಿಲ್‌ನ (ರಾಷ್ಟ್ರೀಯ ಸುರಕ್ಷತಾ ಪರಿಷತ್ತು) ಕರ್ನಾಟಕ ಶಾಖೆಯ ಶಿವಮೊಗ್ಗ ಹಾಗೂ ಭದ್ರಾವತಿ ಘಟಕ ಹಾಗೂ ಮಾಚೇನಹಳ್ಳಿ ಕೈಗಾರಿಕಾ ಸಂಸ್ಥೆಗಳ ಆಶ್ರಯದಲ್ಲಿ ಮಾಚೇನಹಳ್ಳಿ ಕೈಗಾರಿಕಾ ವಸಾಹತು ಪ್ರದೇಶದ ಉದ್ಯಮ ಭವನದಲ್ಲಿ ಶುಕ್ರವಾರ ಕೈಗಾರಿಕೆಗಳಲ್ಲಿ ಅಪಘಾತಗಳ ನಿರ್ಮೂಲನೆ ಕುರಿತ ಒಂದು ದಿನದ ಸುರಕ್ಷತಾ ತರಬೇತಿ ಕಾರ್ಯಾಗಾರ ನಡೆಯಿತು. ಅಧ್ಯಕ್ಷ ಎಂ.ರಾಜು ಕಾರ್ಯಕ್ರಮ ಉದ್ಘಾಟಿಸಿದರು. ಅತಿಥಿಗಳಾಗಿ ಭಾಗವಹಿಸಿದ್ದ ಶಿವಮೊಗ್ಗ ಹಾಲು ಒಕ್ಕೂಟದ ಪ್ರಬಂಧಕ ಎಚ್.ಸಿ. ವೀರಣ್ಣ ಸುರಕ್ಷತಾ ಕ್ರಮಗಳ ನಿರ್ಲಕ್ಷತೆಯಿಂದ ಆಗುವ ಅನಾಹುತಗಳ ಬಗ್ಗೆ ಮಾತನಾಡಿದರು. ನ್ಯಾಷನಲ್ ಸೇಫ್ಟಿ ಕೌನ್ಸಿಲ್ ಸಂಯೋಜಕ ಬಿ.ಎಂ. ಮೆಂಡೋಜ್, ಅಪಘಾತ ತಡೆಗಟ್ಟುವ ಕ್ರಮಗಳು ಮತ್ತು ಸುರಕ್ಷತಾ ಉಪಕರಣಗಳ ನಿರ್ವಹಣೆ, ಎಂಪಿಎಂ ನಿವೃತ್ತ ಸಹಾಯಕ ಮಹಾಪ್ರಬಂಧಕ ಪಿ.ಪಿ.ಹೆಗ್ಡೆ, ವಿದ್ಯುತ್ ಸುರಕ್ಷತೆ, ಎನ್.ಆರ್.ಗೋಪಾಲ್ ರಾಸಾಯನಿಕ ಸುರಕ್ಷತೆ ಮತ್ತು ಅಗ್ನಿ ಸುರಕ್ಷತೆ ಬಗ್ಗೆ ಮಾತನಾಡಿದರು. ನ್ಯಾಷನಲ್ ಸೇಫ್ಟಿ ಕೌನ್ಸಿಲ್ ಸಂಯೋಜಕ ಬಂಡೆಪ್ಪ ಅಲ್ಲೂರೆ ಮಾತನಾಡಿದರು. ಸಂಘದ ಕಾರ್ಯದರ್ಶಿ ಬೆನಕಪ್ಪ ಅಧ್ಯಕ್ಷತೆ ವಹಿಸಿದ್ದರು. ಪ್ರಾರ್ಥನಾ ಎಂಜಿನಿಯರಿಂಗ್ ಸಂಸ್ಥೆಯ ನಿರ್ದೇಶಕ ಪಾಲಪ್ಪ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.