ಶಿವಮೊಗ್ಗ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಸೋಗಾನೆ ಗ್ರಾಮದಲ್ಲಿ ವಿಮಾನ ನಿಲ್ದಾಣ ಕಾಮಗಾರಿಯು ನಾನಾ ಕಾರಣಗಳಿಂದ ಸ್ಥಗಿತವಾಗಿದೆ. ಇದರಿಂದ ಈ ಯೋಜನೆಗೆ ವೆಚ್ಚ ಮಾಡಲಾದ ನೂರಾರು ಕೋಟಿ ನಾಗರೀಕರ ತೆರಿಗೆ ಹಣ ದುಂದು ವೆಚ್ಚ ಆಗುವಂತಾಗಿದೆ. ಈ ಹಿನ್ನೆಲೆಯಲ್ಲಿ ಕಾಲಮಿತಿಯೊಳಗೆ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಲು ಕೇಂದ್ರ ವಿಮಾನಯಾನ ಸಚಿವರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಯುವ ಕಾಂಗ್ರೆಸ್ ಮುಖಂಡರಾದ ರಂಗನಾಥ್, ಟಿ.ವಿ.ರಂಜಿತ್, ಪ್ರವೀಣಕುಮಾರ್, ಗಿರೀಶ್ ಮತ್ತಿತರರು ಸಚಿವರನ್ನು ಭೇಟಿಯಾಗಿ ಮನವಿ ಅರ್ಪಿಸಿದರು.
ಸ್ವಉದ್ಯೋಗ; ಅವಧಿ ವಿಸ್ತರಣೆ
ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪ್ರಸಕ್ತ ಸಾಲಿನ ಉದ್ಯೋಗಿನಿ ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಉತ್ಸುಕರಿರುವ ಮಹಿಳೆಯರಿಂದ ಅರ್ಜಿ ಆಹ್ವಾನಿಸಿತ್ತು. ಈ ಅರ್ಜಿಗಳನ್ನು ಸಲ್ಲಿಸಲು ನಿಗದಿಗೊಳಿಸಲಾಗಿದ್ದ ದಿನಾಂಕವನ್ನು ಜುಲೈ 15ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.