ಶಿವಮೊಗ್ಗ

ಯಶಸ್ವಿನಿ ನಗರ ಸಹಕಾರಿಗಳ ಆರೋಗ್ಯ ಯೋಜನೆಗೆ ಚಾಲನೆ

Published On :

ಸಾಗರ: ಇಲ್ಲಿನ ಸರ್ಕಾರಿ ನೌಕರರ ಭವನದಲ್ಲಿ ಭಾನುವಾರ ಟೌನ್ ಹೌಸ್ ಬಿಲ್ಡಿಂಗ್ ಸೊಸೈಟಿ ವತಿಯಿಂದ ಜಾರಿಗೆ ತರಲಾಗಿರುವ ಯಶಸ್ವಿನಿ ನಗರ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆಗೆ ಚಾಲನೆ ನೀಡಲಾಯಿತು.
ಯೋಜನೆಗೆ ಚಾಲನೆ ನೀಡಿ ಮಾತನಾಡಿದ ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಕಾಗೋಡು ಅಣ್ಣಪ್ಪ, ಆಧುನಿಕತೆ ಮನುಷ್ಯನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಹೊಸಹೊಸ ಕಾಯಿಲೆಗಳು ಬರುತ್ತಿರುವುದರಿಂದ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ವೆಚ್ಚವಾಗುತ್ತಿದೆ. ಬಡಕುಟುಂಬಗಳಿಗೆ ಏಕಕಾಲಕ್ಕೆ ಇಷ್ಟೊಂದು ಹಣ ಭರಿಸಲು ಸಾಧ್ಯವಾಗುವುದಿಲ್ಲ. ಇಂಥ ಸಂದರ್ಭದಲ್ಲಿ ಯಶಸ್ವಿನಿ ಅನುಕೂಲಕರ ಎಂದರು.
ಹಿಂದೆ ಯಶಸ್ವಿನಿ ಯೋಜನೆ ಕೇವಲ ಗ್ರಾಮಾಂತರ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿತ್ತು. ಬಡವರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿಯೂ ಇರುತ್ತಾರೆ. ಅದನ್ನು ಅರಿತ ಸರ್ಕಾರ ನಗರ ಪ್ರದೇಶಗಳಿಗೂ ಯಶಸ್ವಿನಿ ಯೋಜನೆ ಜಾರಿಗೆ ತಂದಿದೆ. ಸೊಸೈಟಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಷೇರುದಾರರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳುವ ಮೂಲಕ ಯೋಜನೆ ಸದುಪಯೋಗಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಸಹಕಾರಿ ಸಂಘಗಳ ಸಹಾಯಕ ನಿಬಂಧಕ ಜಿ.ಎಸ್.ಜಯಪ್ರಕಾಶ್, ರಾಜ್ಯದ 494 ಆಸ್ಪತ್ರೆಗಳು ಯೋಜನೆ ವ್ಯಾಪ್ತಿಗೆ ಒಳಪಟ್ಟಿದ್ದು, ಹೃದಯ, ಕಿಡ್ನಿ, ಶಸ್ತ್ರಚಿಕಿತ್ಸೆ, ಅಪಫಾತ, ಹೆರಿಗೆ, ಗರ್ಭಕೋಶ ಚಿಕಿತ್ಸೆಯಂತಹ ಸಂದರ್ಭದಲ್ಲಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದರು.
ಸೊಸೈಟಿ ಅಧ್ಯಕ್ಷ ಬಿ.ಎಸ್.ಪ್ರಭಾಕರ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ವಿ.ಚಂದ್ರಶೇಖರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್. ಆರ್. ನಾಗಭೂಷಣ್, ನಗರಸಭೆ ಸದಸ್ಯೆ ಪಸಿಹಾ ಬಾನು, ಸೊಸೈಟಿ ನಿರ್ದೇಶಕರಾದ ಆಸಿಫ್, ಅರುಣಾ ವಿನಾಯಕ, ಮಂಜಪ್ಪ ಹಾಜರಿದ್ದರು. ಎಸ್.ಸತ್ಯನಾರಾಯಣ ಸ್ವಾಗತಿಸಿದರು. ಎಸ್.ಬಿ.ರಘುನಾಥ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿ.ಸಿ.ವೀರಾಜ ಜೈನ್ ವಂದಿಸಿದರು. ಎಸ್.ಎಸ್.ರಮೇಶ್ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.