ಶಿವಮೊಗ್ಗ

ವಿದ್ಯಾರ್ಥಿಗಳೇ ಆಕರ್ಷಣೆ ಬಿಟ್ಟು ಗುರಿ ಮುಟ್ಟಿ

Published On :

ಸಾಗರ: ಬಾಹ್ಯಾಕರ್ಷಣೆಗಳು ವಿದ್ಯಾರ್ಥಿಗಳನ್ನು ದಿಕ್ಕುತಪ್ಪಿಸುತ್ತಿದ್ದು, ಅದಕ್ಕೆ ವಿದ್ಯಾರ್ಥಿಗಳು ವಿಚಲಿತರಾಗದೆ ಗುರಿ ಸಾಧನೆಯತ್ತ ಮುಖ ಮಾಡಬೇಕು ಎಂದು ಆರ್.ಎಸ್.ಎಸ್. ಪ್ರಚಾರಕ ಗುರುರಾಜ್ ಹೇಳಿದರು.
ಇಲ್ಲಿನ ಸೀತಾಬಾಯಿ ರಾಮರಾವ್ ಬಾಪಟ್ ಚಾರಿಟಬಲ್ ಟ್ರಸ್ಟ್ ಹಾಗೂ ಸೇವಾಸಾಗರ ಟ್ರಸ್ ಭಾನುವಾರ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅವರು, ಸಾಧನೆಗಾಗಿ ಒಳ್ಳೆಯ ಗುರಿ ಇಟ್ಟುಕೊಳ್ಳಬೇಕು. ಇಚ್ಛಾಶಕ್ತಿ ಇದ್ದರೆ ಮಾತ್ರ ಗುರಿಸಾಧನೆ ಮಾಡಲು ಸಾಧ್ಯ ಎಂದು ಹೇಳಿದರು.
ಇಂದು ಮಕ್ಕಳಿಗೆ ಶಿಕ್ಷಣದ ಜತೆ ಸಂಸ್ಕಾರವನ್ನೂ ಕೊಡಬೇಕು ಎಂದರು.
ನಗರಸಭೆ ಅಧ್ಯಕ್ಷೆ ಲಲಿತಮ್ಮ ಮಾತನಾಡಿದರು. ಎಸ್‌ಆರ್‌ಬಿ ಟ್ರಸ್ಟ್‌ನ ಟ್ರಸ್ಟಿ ಡಾ.ವಾಮನರಾವ್ ಅಧ್ಯಕ್ಷತೆ ವಹಿಸಿದ್ದರು. ಸೇವಾಸಾಗರ ವಿದ್ಯಾಸಂಸ್ಥೆಯ ಅಧ್ಯಕ್ಷ ಯು.ಹೆಚ್.ರಾಮಪ್ಪ, ಯು.ಎಂ.ರಾಘವೇಂದ್ರ ಹಾಜರಿದ್ದರು. ಕೆ.ವೆಂಕಟೇಶ್ ಸ್ವಾಗತಿಸಿದರು. ರಾಮಕೃಷ್ಣ ಬಾಪಟ್ ವಂದಿಸಿದರು. ನಾರಾಯಣಮೂರ್ತಿ ನಿರೂಪಿಸಿದರು. ತಾಲೂಕಿನ ಪ್ರತಿ ಪ್ರೌಢಶಾಲೆಯ ಹತ್ತನೆ ತರಗತಿಯಲ್ಲಿ ಪ್ರಥಮ ಬಂದ ನಲವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು. ಉಳ್ಳೂರು ಮಹಾಬಲರಾವ್ ಸ್ಮರಣಾರ್ಥ ನಗದು ಪುರಸ್ಕಾರ ವಿತರಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.