ಶಿವಮೊಗ್ಗ

'ಕ್ರೀಡೆ, ಶೈಕ್ಷಣಿಕ ಕಾರ್ಯದಿಂದ ಸದೃಢ ಮನಸ್ಸು'

Published On :

ಕ.ಪ್ರ.ವಾರ್ತೆ  ಸೊರಬ  ಮಾ.3
ಶಿಕ್ಷಕರು ಕ್ರೀಡಾ ಮತ್ತು ಶೈಕ್ಷಣಿಕ ಕಾರ್ಯಾಗಾರದಂತಹ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಒತ್ತಡಗಳನ್ನು ಕಡಿಮೆ ಮಾಡಿ ಸದೃಢತೆ ಹೆಚ್ಚಿಸುತ್ತದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಮಲ್ಲಿಕಾರ್ಜುನ ಹೇಳಿದರು.
ತಾಲೂಕಿನ ಹಳೇ ಸೊರಬ ಗ್ರಾಮದ ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸೋಮವಾರ ಪ್ರಾಥಮಿಕ ಶಾಲಾ ಶಿಕ್ಷಕರಿಗಾಗಿ ಹಮ್ಮಿಕೊಂಡಿದ್ದ ಶೈಕ್ಷಣಿಕ ಕಾರ್ಯಾಗಾರ, ಕ್ರೀಡಾಕೂಟ ಮತ್ತು ವಾರ್ಷಿಕ ಮಹಾಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಾಥಮಿಕ ಶಾಲಾ ಶಿಕ್ಷಣ ಹಂತದಲ್ಲಿ ಶಿಕ್ಷಕರಿಗೆ ಸರ್ಕಾರದ ಹಲವು ಯೋಜನೆಗಳಿಂದ ಒತ್ತಡದಲ್ಲಿ ಕಾರ್ಯನಿರ್ವಹಿಸಬೇಕಿದೆ. ಬೆಳಗ್ಗೆ 10 ರಿಂದ ಸಂಜೆ 4.30 ಗಂಟೆವರೆಗೆ ಬಿಡುವಿಲ್ಲದೇ ಮಕ್ಕಳಿಗೆ ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕಿದೆ. ಇಂಥ ಅನೇಕ ಒತ್ತಡಗಳ ನಡುವೆಯೂ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ ಎಂದರು.
ಸರ್ಕಾರಿ ಶಾಲೆಗಳಲ್ಲಿ ತರಬೇತಿ ಪಡೆದ ಉತ್ತಮ ಶಿಕ್ಷಣ ನೀಡುವ ಶಿಕ್ಷಕರಿದ್ದಾರೆ. ಪಠ್ಯದ ಜೊತೆಗೆ ವಿದ್ಯಾರ್ಥಿಗಳಿಗೆ ಪ್ರಚಲಿತ ವಿದ್ಯಮಾನಗಳ ಜೊತೆಗೆ ನೈತಿಕ ಶಿಕ್ಷಣ ನೀಡಬೇಕು ಎಂದು ಶಿಕ್ಷಕರಿಗೆ ಕರೆ ನೀಡಿದರು.
ಹಲವು ವರ್ಷಗಳಿಂದ ಹಾಗೆಯೇ ಇರುವ ವೈದ್ಯಕೀಯ ವೆಚ್ಚವನ್ನು ತಕ್ಷಣ ಬಿಡುಗಡೆ ಮಾಡಬೇಕು. ಶಿಕ್ಷಕರ ಮೇಲಿರುವ ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನಾ ಪದ್ಧತಿಯನ್ನು ಸರಳೀಕರಣಗೊಳಿಸಬೇಕು, ದೈಹಿಕ ಶಿಕ್ಷಕರನ್ನು ಇತರೆ ಶಿಕ್ಷಕರೆಂದು ಪರಿಗಣಿಸಬೇಕು ಹಾಗೂ ಬಡ್ತಿ ನೀಡಬೇಕು. ಶೌಚಾಲಯ ನಿರ್ವಹಣೆಗೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕು ಎಂಬ ಹಲವು ಬೇಡಿಕೆಗಳ ಬಗ್ಗೆ ಜಿಪಂ ಅಧ್ಯಕ್ಷೆ ಗೀತಾ ಮಲ್ಲಿಕಾರ್ಜುನ ಅವರಿಗೆ ಪ್ರಾಥಮಿಕ ಶಿಕ್ಷಕರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.
ಸಂಘದ ಅಧ್ಯಕ್ಷ ಶಿವಾನಂದ ಪಾಣಿ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಸದಸ್ಯರಾದ ಹುಣವಳ್ಳಿ ಗಂಗಾಧರಪ್ಪ, ಗುರುಕುಮಾರ್ ಪಾಟೀಲ್, ಕೋಮಲಾ ನಿರಂಜನ, ತಾ.ಪಂ. ಸದಸ್ಯ ವೀರಭದ್ರಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ನಾಗರಾಜ, ಸಮನ್ವಯಾಧಿಕಾರಿ ಪಂಚಾಕ್ಷರಿ, ಅಕ್ಷರ ದಾಸೋಹ ಯೋಜನೆಯ ಸ.ನಿ. ಕೆ.ಆರ್.ರಾಮಪ್ಪ, ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್.ಎಸ್. ಬಣಕಾರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹೊಳೆಲಿಂಗಪ್ಪ ಮೊದಲಾದವರು ಇದ್ದರು. ನಂತರ ಶಾಲಾ ಶಿಕ್ಷಕರಿಗೆ ಗುಂಡು ಎಸೆತ, ಓಟದ ಸ್ಪರ್ಧೆ, ನಿಧಾನ ಬೈಕ್ ರೇಸ್, ವಾಲಿಬಾಲ್, ಥ್ರೋಬಾಲ್ ಹಾಗೂ ಲಿಂಬು-ಚಮಚ ಓಟ ಸ್ಪರ್ಧೆಗಳು ನಡೆದವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.