ಶಿವಮೊಗ್ಗ

'ಶ್ರಮ, ಇಚ್ಛಾಶಕ್ತಿಯೊಂದಿಗೆ ಕ್ರೀಡೆಯಲ್ಲಿ ಪಾಲ್ಗೊಳ್ಳಿ'

Published On :

ಹೊಸನಗರ: ಕ್ರೀಡೆಗೆ ಅಗತ್ಯವಾದ ಶ್ರಮ ಹಾಗೂ ಇಚ್ಛಾಶಕ್ತಿ ಗುಣ ಬೆಳೆಸಿಕೊಂಡು ಉತ್ತಮ ಕ್ರೀಡಾಪಟುಗಳಾಗುವಂತೆ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಕ್ರೀಡಾಪಟುಗಳಿಗೆ ಕರೆ ನೀಡಿದರು.
ಇಲ್ಲಿನ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಕುವೆಂಪು ವಿಶ್ವ ವಿದ್ಯಾನಿಲಯದ ಅಂತರ ಕಾಲೇಜು ಮಟ್ಟದ 27ನೇ ಮಹಿಳಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ಹೊಸನಗರದಲ್ಲಿ ಈ ಕ್ರೀಡಾಕೂಟ ಆಯೋಜಿಸಿರುವುದು ನಿಜಕ್ಕೂ ಶ್ಲಾಘನೀಯ ಎಂದ ಕಾಗೋಡು, ಕ್ರೀಡಾಪಟುಗಳು ತಮ್ಮ ಮನೋಸ್ಥೈರ್ಯ ಹೆಚ್ಚಿಸಿಕೊಳ್ಳುವ ಮೂಲಕ ಕ್ರೀಡಾಕೂಟದ ಯಶಸ್ಸಿಗೆ ಸಹಕರಿಸುವಂತೆ ಕೋರಿದರು.
ಅರ್ಜುನ್ ಪ್ರಶಸ್ತಿ ಪುರಸ್ಕೃತ ಮಾಜಿ ಕ್ರೀಡಾಪಟು ಎಸ್.ಡಿ. ಈಶನ್, ಕ್ರೀಡಾಪಟುಗಳಿಗೆ ಸೋಲು-ಗೆಲುವು ಮುಖ್ಯವಲ್ಲ. ಪಾಲ್ಗೊಳ್ಳುವಿಕೆ ಮುಖ್ಯ. ಸೋಲನ್ನು ಒಪ್ಪಿಯೇ ಸ್ಪರ್ಧೆಯಲ್ಲಿ ಪಾಲ್ಗೊಳ್ಳಿ. ಕ್ರೀಡೆಗೆ ನಿರಂತರ ಶ್ರಮ, ಶ್ರದ್ಧೆ ಹಾಗೂ ಪ್ರಯತ್ನ ಅಗತ್ಯ. ಕ್ರೀಡೆಯೂ ಕ್ರೀಡಾಪಟುವಿಗೆ ಧೈರ್ಯ, ಛಲ, ಆರೋಗ್ಯ, ಸ್ನೇಹ ನೀಡುತ್ತದೆ. ಕ್ರಿಕೆಟಿನಂತೆ ಎಲ್ಲಾ ಕ್ರೀಡೆಗಳನ್ನು ಪ್ರೀತಿಸುವ ಮನೋಭಾವ ಬೆಳೆಸಿಕೊಳ್ಳಬೇಕೆಂದರು.
ಕುವೆಂಪು ವಿವಿ ಕ್ರೀಡಾ ವಿಭಾಗದ ನಿರ್ದೇಶಕ ಎಸ್.ಡಿ. ಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಈ ಕ್ರೀಡಾಕೂಟದಲ್ಲಿ ವಿವಿಯ ಒಟ್ಟು 33 ತಂಡಗಳಲ್ಲಿ ಈ ವರೆಗೂ 18 ತಂಡಗಳನ್ನು ಭಾಗವಹಿಸಿದ್ದು, ಕ್ರೀಡಾಪಟುಗಳ ಪ್ರತಿಭೆ ಅನಾವರಣಗೊಳ್ಳಲು ಕ್ರೀಡಾಕೂಟ ವೇದಿಕೆ ಆಗಿದೆ ಎಂದರು.
ಸನ್ಮಾನ: ಇದೇ ಸಂದರ್ಭದಲ್ಲಿ ದ್ರೋಣಾಚಾರ್ಯ ಪ್ರಶಸ್ತಿ ಪುರಸ್ಕೃತ, ಏಷಿಯನ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ವಿಜೇತ ಮಾಜಿ ಕ್ರೀಡಾಪಟು ಎಸ್.ಡಿ. ಈಶನ್ ಅವರನ್ನು ಕ್ರೀಡಾಕೂಟದ ಆಡಳಿತ ಮಂಡಳಿ ಪರವಾಗಿ ಶಾಸಕ ಕಾಗೋಡು ತಿಮ್ಮಪ್ಪ ಸಮ್ಮಾನಿಸಿದರು.
ಪ್ರಾಂಶುಪಾಲ ಬಿ. ಕರುಣಾಕರ ಕಾರ್ಯಕ್ರಮದ ಆಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಸದಸ್ಯರಾದ ಜ್ಯೋತಿ, ಶುಭಾ, ರತ್ನಾಕರ ಕಲಗೋಡು, ತಾ.ಪಂ. ಅಧ್ಯಕ್ಷೆ ನಾಗರತ್ನ, ಸದಸ್ಯೆ ಪೂರ್ಣಿಮಾ, ನಿರ್ಮಲ, ಬಗರ್‌ಹುಕುಂ ಸಮಿತಿ ಅಧ್ಯಕ್ಷ ಏರಿಗಿ ಉಮೇಶ್, ಜಯನಗರ ಗುರು, ಹೊಸನಗರ ಉಬೇದ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.