ಇಂದು ಆಯನೂರು ನಾಡಕಚೇರಿ ಉದ್ಘಾಟನೆ
ಕ.ಪ್ರ.ವಾರ್ತೆ ಆಯನೂರು ಮಾ. 4
ಆಯನೂರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಬಹುದಿನಗಳ ಬೇಡಿಕೆ ಅಂತೂ ಈಡೇರಿಸುವ ಸುಸಂದರ್ಭ ಕೂಡಿಬಂದಿದೆ.
ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್ ಅವರು ಸರ್ಕಾರದ ಮೇಲೆ ನಿರಂತರ ಒತ್ತಡ ತಂದ ಪರಿಣಾಮ, ಆಯನೂರು ಹೋಬಳಿಯಾಗಿ ಘೋಷಣೆಯಾಗಿತ್ತು. ಆದರೆ, ಹೋಬಳಿಗೆ ಸಂಬಂಧಿಸಿದಂತೆ ಕಚೇರಿಗಳು ಮಾತ್ರ ಆರಂಭವಾಗಿರಲಿಲ್ಲ. ಹೋಬಳಿ ಘೋಷಣೆಯಾಗಿದ ಸುದ್ದಿಯಿಂದ ಖುಷಿಪಟ್ಟು ಪಟಾಕಿ ಸಿಡಿಸಿದ್ದ ಗ್ರಾಮಸ್ಥರು, ಕಚೇರಿ ಆರಂಭಕ್ಕೆ ಉದಾಸೀನ ಧೋರಣೆ ಅನುಸರಿಸುತ್ತಿರುವ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿತ್ತು. ಊರಿನ ಪ್ರಮುಖರು ಕಳೆದ ಶನಿವಾರವಷ್ಟೇ ತಹಸೀಲ್ದಾರ್ ಅವರಿಗೆ ಮನವಿ ಅರ್ಪಿಸಿ, ಕಚೇರಿಯನ್ನು ತಕ್ಷಣವನ್ನು ಆರಂಭಿಸುವಂತೆ, ಇಲ್ಲವಾದರೆ ಹೋರಾಟ ನಡೆಸುವ ಎಚ್ಚರಿಕೆ ನೀಡಿತ್ತು.
ತಕ್ಷಣವೇ ಎಚ್ಚೆತ್ತ ಜಿಲ್ಲಾಡಳಿತ ಇದೀಗ ಹೋಬಳಿ ಕಚೇರಿ ಆರಂಭಿಸಲು ಮುಂದಾಗಿದೆ. ಅದರಲ್ಲೂ ಸದ್ಯವೇ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಕಾರಣ ತರಾತುರಿಯಲ್ಲಿ ಕಾರ್ಯಕ್ರಮ ರೂಪಿಸಿದೆ. ಆಯನೂರು ಹೋಬಳಿ ಕೇಂದ್ರದಲ್ಲಿ ನಾಡ ಕಚೇರಿ ಹಾಗೂ ಅಟಲ್ಜೀ ಜನಸ್ನೇಹಿ ಕೇಂದ್ರದ ಉದ್ಘಾಟನೆ ಮಾ. 5ರಂದು ಇಲ್ಲಿನ ಪ್ರವಾಸಿ ಮಂದಿರದ ಆವರಣದಲ್ಲಿ ನಡೆಯಲಿದೆ.
ಬೆಳಗ್ಗೆ 11 ಗಂಟೆಗೆ ನಡೆವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕಿಮ್ಮನೆ ರತ್ನಾಕರ್ ನೂತನ ಕಚೇರಿ ಉದ್ಘಾಟಿಸುವರು. ಶಾಸಕರಾದ ಶಾರದಾ ಪೂರ್ಯಾನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ, ಸಂಸದ ಬಿ.ವೈ. ರಾಘವೇಂದ್ರ, ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್ ಸೇರಿದಂತೆ ಜಿಪಂ ಅಧ್ಯಕ್ಷೆ ಗೀತಾ ಮಲ್ಲಿಕಾರ್ಜುನ, ವಿಧಾನಪರಿಷತ್ ಸದಸ್ಯರು, ತಾಲೂಕು ಪಂಚಾಯಿತಿ ಸದಸ್ಯರು ಉಪಸ್ಥಿತರಿರುವರು.
ಗ್ರಾಪಂ ಅಧ್ಯಕ್ಷೆ ಭಾಗ್ಯ ನರಸಿಂಹ, ಉಪಾಧ್ಯಕ್ಷ ಪ್ರಭಾಕರ ಸೇರಿದಂತೆ ಸದಸ್ಯರು, ಡಿಸಿ ವಿಪುಲ್ ಬನ್ಸಲ್, ಎಸಿ ಕುಸುಮಕುಮಾರಿ ಭಾಗವಹಿಸುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

