ಶಿವಮೊಗ್ಗ

ಇಂದು ಶಿಲಾನ್ಯಾಸ, ಉದ್ಘಾಟನೆ

Published On :

ಶಿವಮೊಗ್ಗ: ಲೋಕೋಪಯೋಗಿ, ರಾಷ್ಟ್ರೀಯ ಹೆದ್ದಾರಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಆಶ್ರಯದಲ್ಲಿ ಮಾ. 5ರಂದು ಬೆಳಗ್ಗೆ 11 ಗಂಟೆಗೆ ಸಾಗರದ ನೆಹರು ಮೈದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ, ಉದ್ಘಾಟನೆ ಮತ್ತು ವಿವಿಧ ಸರ್ಕಾರಿ ಸವಲತ್ತುಗಳ ವಿತರಣಾ ಸಮಾರಂಭ ಏರ್ಪಡಿಸಲಾಗಿದೆ.
ಕಾರ್ಯಕ್ರಮವನ್ನು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪನವರು ಉದ್ಘಾಟಿಸುವರು. ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಉಪಸ್ಥಿತರಿರುವರು. ಲೋಕೋಪಯೋಗಿ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಆರೋಗ್ಯ -ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್, ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ್, ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಮಲ್ಲಿಕಾರ್ಜುನ, ಸಂಸದ ಬಿ.ವೈ. ರಾಘವೇಂದ್ರ, ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್ ಸೇರಿದಂತೆ ಜಿಲ್ಲೆಯ ವಿಧಾನ ಪರಿಷತ್ ಸದಸ್ಯರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿರುವರು.
ಸಚಿವ ಮಹದೇವಪ್ಪ ಜಿಲ್ಲಾ ಪ್ರವಾಸ
ಶಿವಮೊಗ್ಗ: ಲೋಕೋಪಯೋಗಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು  ಮಾ. 5ರಂದು ಬೆಳಗ್ಗೆ 11ಗಂಟೆಗೆ ಸಾಗರದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ನಡೆಯುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನಾ ಸಮಾರಂಭ ಹಾಗೂ ವಿವಿಧ ಸರ್ಕಾರಿ ಸವಲತ್ತುಗಳ ವಿತರಣಾ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 4 ಗಂಟೆಗೆ ಶಿವಮೊಗ್ಗದಲ್ಲಿ ಸಾರ್ವಜನಿಕರ ಅಹವಾಲು ಆಲಿಸುವರು. ಅಂದು ರಾತ್ರಿ 10ಗಂಟೆಗೆ ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.