ಶಿವಮೊಗ್ಗ

ನ್ಯಾಯಬೆಲೆ ಅಂಗಡಿಯಲ್ಲಿ ಮದ್ಯ ಮಾರಾಟ: ಬಂಧನ

Published On :

ಶಿವಮೊಗ್ಗ:  ಗೋಂದಿ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ಅಕ್ರಮ ಮದ್ಯ ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ ಎಸ್.ಕೆ. ನರಸಿಂಹಗೌಡ ಅವರನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಬಂಧಿತನಿಂದ 9,720 ಲೀ. ಮದ್ಯ ಹಾಗೂ 2,320 ಲೀ. ಬಿಯರ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಬಕಾರಿ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.
ಬಂಧಿತ ಎಸ್.ಕೆ. ನರಸಿಂಹಗೌಡ ತಮ್ಮ ನ್ಯಾಯಬೆಲೆ ಅಂಗಡಿಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆ ಮೂಲಕ ನೀಡಲಾಗುತ್ತಿರುವ 30 ಕೆಜಿ ಅಕ್ಕಿಯನ್ನು ವಿತರಣೆ ಮಾಡದೇ ಮದ್ಯವನ್ನು ಖರೀದಿ ಮಾಡಿದ ಸಾಲಕ್ಕೆ ಅಕ್ಕಿಯನ್ನು ಜಮಾ ಮಾಡಿಕೊಳ್ಳುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರು ಬಂದಿದ್ದವು.
ಖಚಿತ ಮಾಹಿತಿಯ ಮೇರೆಗೆ ಅಬಕಾರಿ ಉಪಆಯುಕ್ತ ಜಗದೀಶ್ ನಾಯಕ್ ಮಾರ್ಗದರ್ಶನದಲ್ಲಿ ಅಬಕಾರಿ ನಿರೀಕ್ಷಕ ಡಿ.ಎನ್. ಹನುಮಂತಪ್ಪ, ಅಬಕಾರಿ ಉಪನಿರೀಕ್ಷಕ ಎಚ್.ವಿ. ಮಂಜಯ್ಯ ದಾಳಿ ನಡೆಸಿದ್ದರು. ಅಬಕಾರಿ ರಕ್ಷಕ ಎಸ್.ಡಿ.ಚಂದ್ರಪ್ಪ, ಮಡಿವಾಳಪ್ಪ, ರವೀಂದ್ರ ಪಾಟೀಲ್, ಕುಮಾರ್ ಮತ್ತು ಚಾಲಕ ಶಿವಕುಮಾರ್ ದಾಳಿಯಲ್ಲಿ ಭಾಗವಹಿಸಿದ್ದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.