ಶಿವಮೊಗ್ಗ

ದ್ವಿತೀಯ ಪಿಯುಸಿ ಪರೀಕ್ಷೆಗೆ ಮುಂಜಾಗ್ರತಾ ಕ್ರಮ

Published On :

ಶಿವಮೊಗ್ಗ: ಪದವಿಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆಯು ಮಾ. 12ರಿಂದ 27ರವರೆಗೆ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲಿದ್ದು, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಎಚ್. ಇಂದುಮತಿ ತಿಳಿಸಿದ್ದಾರೆ.
ಈ ಸಂಬಂಧ ಗುರುವಾರ ನಡೆದ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯಲ್ಲಿ ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳ ಅಧೀಕ್ಷಕರಿಗೆ ಮಾಹಿತಿ ನೀಡಿ, ಅಗತ್ಯ ಸಿದ್ಧತೆ ಕೈಗೊಳ್ಳಲು ಸೂಚಿಸಲಾಗಿದೆ ಎಂದವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಶಿವಮೊಗ್ಗ ತಾಲೂಕಿನಲ್ಲಿ 2, ಭದ್ರಾವತಿ ತಾಲೂಕಿನಲ್ಲಿ 7, ತೀರ್ಥಹಳ್ಳಿ ತಾಲೂಕಿನಲ್ಲಿ 3, ಹೊಸನಗರ ತಾಲೂಕಿನಲ್ಲಿ 2, ಸಾಗರ ತಾಲೂಕಿನಲ್ಲಿ 4, ಸೊರಬ ತಾಲೂಕಿನಲ್ಲಿ 2 ಹಾಗೂ ಶಿಕಾರಿಪುರ ತಾಲೂಕಿನಲ್ಲಿ 3 ಪರೀಕ್ಷಾ ಕೇಂದ್ರಗಳು ಸೇರಿದಂತೆ ಒಟ್ಟು 32 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಜಿಲ್ಲೆಯಲ್ಲಿ 7,146 ಕಲಾ ವಿಭಾಗ, 5,883 ವಾಣಿಜ್ಯ ಮತ್ತು 5223 ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 18,252 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
ಪ್ರತಿ ಪರೀಕ್ಷಾ ಕೇಂದ್ರಕ್ಕೆ ಓರ್ವರು ಮುಖ್ಯ ಅಧೀಕ್ಷಕರು, ಒಬ್ಬರು ಸಹ ಮುಖ್ಯ ಅಧೀಕ್ಷಕರು ಮತ್ತು ಪ್ರತಿ ಪರೀಕ್ಷಾ ಕೇಂದ್ರಕ್ಕೆ ಬೇರೆ ಜಿಲ್ಲೆಯಿಂದ ಒಬ್ಬರು ಉಪನ್ಯಾಸಕರನ್ನು ವಿಶೇಷ ಜಾಗೃತದಳದ ಸದಸ್ಯರನ್ನಾಗಿ ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ನಿಯೋಜಿಸಿ ಆದೇಶ ಹೊರಡಿಸಿದ್ದಾರೆ.
ಈ ಪ್ರತಿ ತಂಡದಲ್ಲಿ ಪ್ರಾಂಶುಪಾಲರು ಹಾಗೂ ಮೂವರು ಉಪನ್ಯಾಸಕರಿರಲಿದ್ದಾರೆ. ಈ ತಂಡಗಳು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಸಂಚರಿಸಿ ಕಾರ್ಯನಿರ್ವಹಿಸಲಿವೆ.
ಮಾ. 12ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಮಾ. 13ರಂದು ಜೀವಶಾಸ್ತ್ರ, ಎಲೆಕ್ಟ್ರಾನಿಕ್ಸ್, ಮಾ. 14ರಂದು ಸಮಾಜಶಾಸ್ತ್ರ, ಲೆಕ್ಕಶಾಸ್ತ್ರ, ಮಾ. 15ರಂದು ಭೌತಶಾಸ್ತರ, ಮನೋವಿಜ್ಞಾನ, 17ರಂದು ಅರ್ಥಶಾಸ್ತ್ರ, ಜಿಯಾಲಜಿ, 18ರಂದು ಗಣಿತ, ಭೂಗೋಳಶಾಸ್ತ್ರ, 19ರಂದು ಕನ್ನಡ ಐಚ್ಛಿಕ, ಗೃಹವಿಜ್ಞಾನ, ಮೂಲ ವಿಜ್ಞಾನ, 20ರಂದು ರಾಸಾಯನ ಶಾಸ್ತ್ರ, ವ್ಯವಹಾರ ಶಾಸ್ತ್ರ, 21ರಂದು ಲಾಜಿಕ್, ಎಜುಕೇಶನ್, 22ರಂದು ಇತಿಹಾಸ, ಕಂಪ್ಯೂಟರ್ ಸೈನ್ಸ್, 24ರಂದು ಕನ್ನಡ, ತಮಿಳು, ಮಲೆಯಾಳಿ, ಅರೇಬಿಕ್, 25ರಂದು ಮರಾಠಿ, ಉರ್ದು ಮತ್ತು ಸಂಸ್ಕೃತ, 26ರಂದು ಆಂಗ್ಲ ಭಾಷೆ ಮತ್ತು 27ರಂದು ಹಿಂದಿ ಮತ್ತು ತೆಲುಗು ಭಾಷೆಗಳ ಪರೀಕ್ಷೆ ನಡೆಯಲಿವೆ ಎಂದವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.