ಶಿವಮೊಗ್ಗ

ಪೆಸೆಟ್ ಕಾಲೇಜಲ್ಲಿ ವಿಪ್ರೋ ಕ್ಯಾಂಪಸ್

Published On :

ಶಿವಮೊಗ್ಗ: ಪೆಸೆಟ್ ಶಿಕ್ಷಣ ಸಂಸ್ಥೆಯಲ್ಲಿ ಪದವಿ ವಿದ್ಯಾರ್ಥಿಗಳಿಗೆ ಶುಕ್ರವಾರ ನಾಲ್ಕು ವರ್ಷಗಳ ವಿಶೇಷ ಕೋರ್ಸ್‌ಗೆ ವಿಪ್ರೋ ಕಂಪನಿಯವರು ಕ್ಯಾಂಪಸ್ ಆಯ್ಕೆ ನಡೆಸಿದರು.
ವಿಪ್ರೋದ ವೇಸ್‌ವಿಸ್ತಾ ಕಾರ್ಯಕ್ರಮದಡಿ ನಡೆದ ಈ ಆಯ್ಕೆ ಪ್ರಕ್ರಿಯೆಯಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ತಾಂತ್ರಿಕೇತರ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ ಸೂಕ್ತ ತರಬೇತಿ ನೀಡಿ ಅವರಲ್ಲಿ ಕೌಶಲ್ಯ ಅಭಿವೃದ್ಧಿಪಡಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ವಿಪ್ರೋ ಕ್ಯಾಂಪಸ್ ಆಯ್ಕೆ ವಿಭಾಗದ ಮುಖ್ಯಸ್ಥ ರಾಜೀವ್‌ಕುಮಾರ್ ತಿಳಿಸಿದರು.
ವಿಪ್ರೋ ಸಾಫ್ಟ್‌ವೇರ್ ಟೆಕ್ನಾಲಜಿ ಅಕಾಡೆಮಿಯಿಂದ ವಿಜ್ಞಾನ ಪದವೀದರರಿಗೆ ಮಾಹಿತಿ ತಂತ್ರಜ್ಞಾನ ಕುರಿತು 4 ವರ್ಷಗಳ ತರಬೇತಿ ನೀಡುವ ಜೊತೆಗೆ ಐಟಿಯಲ್ಲಿ ಮಾಸ್ಟರ್ ಆಫ್ ಸೈನ್ಲ್ ಪದವಿ ನೀಡಲಾಗುತ್ತದೆ ಎಂದು ವಿವರಿಸಿದರು.
ಬಿಎಸ್ಸಿ, ಬಿಸಿಎಂ ಪದವಿ ವಿದ್ಯಾರ್ಥಿಗಳನ್ನು ಈ ಆಯ್ಕೆಗೆ ಪರಿಗಣಿಸಲಾಗುತ್ತದೆ ಎಂದ ಅವರು, 48 ತಿಂಗಳ ಕೋರ್ಸನ್ನು 8 ಸೆಮಿಸ್ಟರ್‌ಗಳಲ್ಲಿ ನಡೆಸಲಾಗುತ್ತದೆ. ಪ್ರತಿ ಸೆಮಿಸ್ಟರ್‌ಗೆ ನಾಲ್ಕು ವಿಷಯಗಳನ್ನು ಅಳವಡಿಸಲಾಗುತ್ತದೆ.
ಈ ಕೋರ್ಸ್ ಮುಗಿಸಿದವರಿಗೆ ಭವಿಷ್ಯದಲ್ಲಿ ಉತ್ತಮ ಅವಕಾಶಗಳು ಬರುತ್ತವೆ. ಕೌಶಲ್ಯಾಭಿವೃದ್ಧಿಯೇ ನಮ್ಮ ಮುಖ್ಯ ಗುರಿಯಾಗಿದೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ಇದೇ ಯೋಜನೆಯಡಿ ಸುಮಾರು 60 ಸಾವಿರ ವಿದ್ಯಾರ್ಥಿಗಳ ಸಂದರ್ಶನ ನಡೆಸಲಾಗಿತ್ತೆಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.