ಏಕಗವಾಕ್ಷಿ ಪದ್ಧತಿ ಜಾರಿ
ಸಾಗರ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಭೆ, ಸಮಾರಂಭ ನಡೆಸುವ, ವಾಹನ ಪರವಾನಗಿ ಹಾಗೂ ಪ್ರಚಾರ ಕಾರ್ಯ ನಿರ್ವಹಿಸುವ ರಾಜಕೀಯ ಪಕ್ಷಗಳ ಅನುಕೂಲಕ್ಕಾಗಿ ಶೀಘ್ರವಾಗಿ ಅನುಮತಿ ನೀಡುವ ಉದ್ದೇಶದಿಂದ ತಹಸೀಲ್ದಾರ್ ಕಚೇರಿಯಲ್ಲಿ ಏಕಗವಾಕ್ಷಿ ಪದ್ಧತಿ ಜಾರಿಗೆ ತರಲಾಗಿದೆ ಎಂದು ಉಪವಿಭಾಗಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಡಾ. ಉದಯಕುಮಾರ್ ಶೆಟ್ಟಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೀತಿ- ಸಂಹಿತೆ ಉಲ್ಲಂಘನೆ, ಮತದಾರರಿಗೆ ಹಣ- ಹೆಂಡ ಹಂಚುವುದು, ಆಮಿಷವೊಡ್ಡುವುದನ್ನು ಕಂಡುಬಂದರೆ ಸಾರ್ವಜನಿಕರು ತಹಸೀಲ್ದಾರ್ ಕಚೇರಿಯಲ್ಲಿ ತೆರೆಯಲಾಗಿರುವ ದೂರು ವಿಭಾಗದ 08183-226074 ದೂರವಾಣಿಗೆ ಕರೆ ಮಾಡಿದರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕ್ಷೇತ್ರ ವ್ಯಾಪ್ತಿಯಲ್ಲಿ ಶಾಂತಿಯುತ ಚುನಾವಣೆ ನಡೆಸಲು ಅಧಿಕಾರಿಗಳನ್ನು ಒಳಗೊಂಡ 27 ತಂಡ ರಚಿಸಲಾಗಿದೆ. ಜತೆಗೆ 2 ಫ್ಲೇಯಿಂಗ್ ಸ್ಕ್ವಾಡ್, 4 ವಿಚಕ್ಷಣ ತಂಡ ನಿಯೋಜಿಸಲಾಗಿದೆ ಎಂದರು.
ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 182623 ಮತದಾರರಿದ್ದು, ಒಟ್ಟು 260 ಮತಗಟ್ಟೆ ಸ್ಥಾಪಿಸಲಾಗಿದೆ. ಈ ಪೈಕಿ 46 ಸೂಕ್ಷ್ಮ ಹಾಗೂ 19 ಅತಿಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ 116 ಜನರು ಭಾರತೀಯ ಸೈನ್ಯದಲ್ಲಿದ್ದು, ಅವರಿಗೆ ರಿಜಿಸ್ಟರ್ ಪೋಸ್ಟ್ ಮೂಲಕ ಮತಪತ್ರ ಕಳಿಸಿಕೊಡಲಾಗುವುದು. ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಲು ್ಲ ಆಡಳಿತ ಅಗತ್ಯ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು. ತಹಸೀಲ್ದಾರ್ ಭಾಗ್ಯಲಕ್ಷ್ಮೀ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

