'ಮೋದಿ, ಬಿಎಸ್ವೈ ಫೋಟೋ ತೆಗೆಸಿ'
ಶಿವಮೊಗ್ಗ: ಬೆಂಗಳೂರು- ಶಿವಮೊಗ್ಗ ಇಂಟರ್ ಸಿಟಿ ಎಕ್ಸ್ಪ್ರೆಸ್ ರೈಲಿನಲ್ಲಿ ನರೇಂದ್ರ ಮೋದಿ ಹಾಗೂ ಯಡಿಯೂರಪ್ಪ ಅವರ ಪೋಟೋ, ಸ್ಲೋಗನ್ ಇರುವ ಪ್ಲೇಕಾರ್ಡ್ ಅಂಟಿಸಿರುವುದು ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು, ಇದನ್ನು ತಕ್ಷಣ ತೆಗೆದು ಹಾಕಬೇಕೆಂದು ಒತ್ತಾಯಿಸಿ ಆಮ್ ಆದ್ಮಿ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖರು ಪ್ರತ್ಯೇಕವಾಗಿ ರೇಲ್ವೆ ಇಲಾಖೆಗೆ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಆಮ್ ಆದ್ಮಿ ಪಕ್ಷ ರೇಲ್ವೆ ಇಲಾಖೆಗೆ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಶಾಂತವೇರಿ ಗೋಪಾಲಗೌಡ ಅಧ್ಯಯನ ಕೇಂದ್ರದ ಕಲ್ಲೂರು ಮೇಘರಾಜ್, ರೈತ ಮುಖಂಡ ಕಡಿದಾಳು ಶಾಮಣ್ಣ, ಪಕ್ಷದ ಜಿಲ್ಲಾಧ್ಯಕ್ಷ ಡಾ. ಪ್ರೀತಮ್, ಕಡ್ಲೆಕಾಯಿ ಮಂಜುನಾಥ್, ಉಂಡಿಗನಾಳ್ ರಾಜ್ ಗೋಪಾಲ್, ಆಶಾ ಹರೀಶ್ ಸೇರಿದಂತೆ ಹಲವರು ಇದ್ದರು.
ಪ್ರತಿ ಬೋಗಿಯಲ್ಲಿಯೂ ನರೇಂದ್ರ ಮೋದಿ ಹಾಗೂ ಯಡಿಯೂರಪ್ಪ ಅವರ ಚಿತ್ರಗಳು ರಾರಾಜಿಸುತ್ತಿವೆ. ಇದಕ್ಕಾಗಿ ಸಾಕಷ್ಟು ಹಣ ಖರ್ಚು ಮಾಡಲಾಗಿದೆ. ಇದು ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ. ಕೂಡಲೇ ತೆರವುಗೊಳಿಸಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕಾಂಗ್ರೆಸ್ ಮನವಿ: ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟವಾಗಿ, ಚುನಾವಣಾ ನೀತಿಸಂಹಿತೆ ಜಾರಿಗೆ ಬಂದಿದ್ದು, ರೇಲ್ವೆ ಬೋಗಿಗಳ ಮೇಲೆ ಬಿಜೆಪಿ ಪಕ್ಷದ ಉದ್ದೇಶಿತ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ಮುಖಂಡರ ಭಾವಚಿತ್ರಗಳನ್ನು ಪ್ರದರ್ಶಿಸಲಾಗಿದೆ. ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್. ಪ್ರಸನ್ನ ಕುಮಾರ್, ಪ್ರಧಾನ ಕಾರ್ಯದರ್ಶಿ ಬಿ.ಎ. ರಮೇಶ್ ಹೆಗ್ಡೆ ಮತ್ತಿತರರು ಮನವಿ ಸಲ್ಲಿಸಿದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮುಕ್ತ ಹಾಗೂ ನ್ಯಾಯ ಸಂಹಿತಾ ಚುನಾವಣೆ ಪ್ರಕ್ರಿಯೆಗೆ ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

