ತಾ.ಜೆಡಿಎಸ್ ಅಧ್ಯಕ್ಷ ನಾಗನಗೌಡ ಪಾಟೀಲ್ ನಿಧನ
ಶಿಕಾರಿಪುರ: ತಾಲೂಕು ಜೆಡಿಎಸ್ ಅಧ್ಯಕ್ಷ, ಭಾರತೀಯ ಕೃಷಿಕ್ ಸಮಾಜದ ಜಿಲ್ಲಾಧ್ಯಕ್ಷ ನಾಗನಗೌಡ ಪಾಟೀಲ್(56) ತೀವ್ರ ಹೃದಯಾಘಾತದಿಂದ ಭಾನುವಾರ ಮಧ್ಯಾಹ್ನ ಮಣಿಪಾಲದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅವರಿಗೆ ಪತ್ನಿ,ಇಬ್ಬರು ಪುತ್ರ ಹಾಗೂ ಪುತ್ರಿ ಇದ್ದಾರೆ. ಅಂತಿಮ ಸಂಸ್ಕಾರ ಸೋಮವಾರ ಮದ್ಯಾಹ್ನದ ವೇಳೆಗೆ ಸ್ವಗ್ರಾಮ ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ನಡೆಯಲಿದೆ.
ಮಾಜಿ ಸಿಎಂ ದಿ.ಬಂಗಾರಪ್ಪ ಅವರ ಆಪ್ತರಾಗಿದ್ದ ನಾಗನಗೌಡ ಪಾಟೀಲ ಅವರು ತಮ್ಮ ಅಪ್ರತಿಮ ಸಂಘಟನಾ ಚತುರರಾಗಿದ್ದರು. 2004ರಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ವಿಜಯ ಮಲ್ಯರ ಜನತಾಪಕ್ಷದಿಂದ ಸ್ಪರ್ಧಿಸಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಪರಾಭವಗೊಂಡಿದ್ದರು.
ತಾಲೂಕು ವೀರಶೈವ ಪಂಚಮಸಾಲಿ ಸಮಾಜದ ಕಾರ್ಯಾಧ್ಯಕ್ಷರಾಗಿ, ಶಿಕಾರಿಪುರದಲ್ಲಿ ನಡೆದ ಸಮಾಜದ ರಾಜ್ಯಮಟ್ಟದ ಸಮಾವೇಶದ ಭರ್ಜರಿ ಯಶಸ್ಸಿಗೆ ಕಾರಣಕರ್ತರಾಗಿ ಹರಿಹರ ಪಂಚಮಸಾಲಿ ಶ್ರೀಗಳಿಂದ ಪ್ರಶಂಸೆಗೊಳಗಾಗಿದ್ದರು.
ಸಂತಾಪ: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಶಾಸಕರಾದ ಮಧು ಬಂಗಾರಪ್ಪ, ಶಾರದಾ ಪೂರ್ಯಾನಾಯ್ಕ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಶ್ರೀಕಾಂತ್, ಎಚ್.ಟಿ. ಬಳಿಗಾರ್, ವೀರಶೈವ ಪಂಚಮಸಾಲಿ ಸಮಾಜದ ರಾಜ್ಯಾಧ್ಯಕ್ಷ ಬಸವರಾಜ ದಿಂಡೂರ್, ತಾಲೂಕು ಅಧ್ಯಕ್ಷ ಬಸವರಾಜಪ್ಪ ಮುದ್ದನಹಳ್ಳಿ ಮತ್ತಿತರರು ಸಂತಾಪ ಸೂಚಿಸಿದ್ದಾರೆ. ತಾಲೂಕು ವೀರಶೈವ ಪಂಚಮಸಾಲಿ ಸಮಾಜ ಸಭೆ ನಡೆಸಿ ಸಂತಾಪ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

