ಮಂಗಲ ಸಭಾಭವನ ಉದ್ಘಾಟನೆ
ಶಿವಮೊಗ್ಗ: ಇಲ್ಲಿನ ವಾಜಪೇಯಿ ಬಡಾವಣೆಯಲ್ಲಿ ಜಿಲ್ಲಾ ಮೊಗವೀರ ಮಹಾಜನ ಸಂಘವು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಸಹಯೋಗದಲ್ಲಿ ನಿರ್ಮಿಸಿರುವ ಮಂಗಲ ಸಭಾಭವನದ ಉದ್ಘಾಟನೆ ಭಾನುವಾರ ನೆರವೇರಿತು. ಮೊಗವೀರ ಸಮಾಜ ಬಂಧುಗಳು ಈ ಸಂದರ್ಭಕ್ಕೆಸಾಕ್ಷಿಯಾದರು.
ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಮೊಗವೀರ ಸಮಾಜದ ಮುಖಂಡ ಹಾಗೂ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಡಾ. ಜಿ. ಶಂಕರ್, ರಾಜಕೀಯ ಆಯಾಯ ಪಕ್ಷಕ್ಕೆ ಮಾತ್ರ ಸೀಮಿತವಾಗಬೇಕು. ಅದನ್ನು ಸಮಾಜದ ಸಂಘಟನೆಯಲ್ಲಿ ತರಬಾರದು. ಸಮಾಜ ಸಂಘಟನೆಯಲ್ಲಿ ರಾಜಕೀಯವನ್ನು ಬಿಟ್ಟು ಎಲ್ಲರೂ ಕೂಡ ಸಂಘಟಿತರಾಗಿ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವಂತೆ ಕರೆ ನೀಡಿದರು.
ಸಂಘಟಿತರಾಗಿ: ಸಮಾಜದ ಸಂಘಟನೆಯಲ್ಲಿ ರಾಜಕೀಯ ಮಾಡಿದರೆ ಸಮಾಜ ಸೌಲಭ್ಯ ಪಡೆಯಲು ಹಾಗೂ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ಇದನ್ನು ಅರಿತು ಎಲ್ಲರೂ ಸಂಘಟಿತರಾಗಿ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.
ಶಿವಮೊಗ್ಗ ಜಿಲ್ಲಾ ಕೇಂದ್ರದಲ್ಲಿ ಉತ್ತಮ ಸಮುದಾಯ ಭವನ ನಿರ್ಮಿಸಲಾಗಿದೆ. ಮುಂದಿನ ದಿನಗಳಲ್ಲಿ ತೀರ್ಥಹಳ್ಳಿ, ಭದ್ರಾವತಿ, ಸಾಗರ ಸೇರಿದಂತೆ ಎಲ್ಲಾ ತಾಲೂಕುಗಳಲ್ಲಿಯೂ ಸಮುದಾಯ ಭವನವಗಳನ್ನು ನಿರ್ಮಿಸಿ ಸಮಾದ ಏಳಿಗೆಗೆ ಶ್ರಮಿಸಬೇಕು. ಇದಕ್ಕೆ ಎಲ್ಲರೂ ಒಮ್ಮತದ ಬೆಂಬಲ ನೀಡಬೇಕೆಂದರು.
ಮೊಗವೀರ ಜಿಲ್ಲಾ ಸಂಘದ ಅಧ್ಯಕ್ಷ ಬಿ.ಎಂ. ಮಹಾಬಲರಾವ್ ಅಧ್ಯಕ್ಷತೆ ವಹಿಸಿದ್ದರು. ಸಮಾಜದ ಮುಖಂಡ ಜಯ ಸಿ. ಕೋಟ್ಯಾನ್, ಬಾರ್ಕೂರ್ ಸಂಯುಕ್ತ ಸಭಾದ ಅಧ್ಯಕ್ಷ ವಿಶ್ವನಾಥ ಮಾಸ್ತರ್, ಕೆಂಚಪ್ಪ, ಶಾಲಿನಿ ಜಿ. ಶಂಕರ್, ರಂಗನಾಥ, ಸದಾನಂದ ಬಳ್ಕೂರು, ಮಂಜುನಾಥ ವೇದಿಕೆಯಲ್ಲಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

