ಶಿವಮೊಗ್ಗ

ಮಕ್ಕಳ ಭವಿಷ್ಯಕ್ಕೆ ಶಿಕ್ಷಕರ ಶ್ರಮ ಅಗತ್ಯ

Published On :

ಕ.ಪ್ರ.ವಾರ್ತೆ    ತ್ಯಾಗರ್ತಿ    ಮಾ. 9
ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಉಜ್ವಲ ಭವಿಷ್ಯ ರೂಪಿಸಲು ಶಿಕ್ಷಕರು ಹೆಚ್ಚಿನ ಶ್ರಮ ವಹಿಸಬೇಕಾಗುತ್ತದೆ ಎಂದು ನಿವೃತ್ತ ಶಿಕ್ಷಕ ಮಹಾಬಲ ರಾವ್ ತ್ಯಾಗರ್ತಿ ಅಭಿಪ್ರಾಯಪಟ್ಟರು.
ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ಮಾ.7ರಂದು ಲಿಟಲ್ ಫ್ಲವರ್ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಿಕ್ಷಕರಿಂದ ವಿದ್ಯೆ ಕಲಿತ ವಿದ್ಯಾರ್ಥಿಗಳು ಉತ್ತಮ ಪ್ರಜೆಯಾಗಿ, ಸದ್ಗುಣ, ಸಂಸ್ಕಾರಯುತರಾಗಿ ಬದುಕುತ್ತಿದ್ದಾರೆ ಎಂದರೆ ಶಿಕ್ಷಕನ ಶ್ರಮ ಸಾರ್ಥಕವಾದಂತೆ ಎಂದರು.
ಮಕ್ಕಳು ತಪ್ಪು ದಾರಿಗೆ ನಡೆಯದಂತೆ ನಾನು, ನನ್ನದು ಎಂಬುದನ್ನು ಮರೆತು ನಮ್ಮದು ಎಂಬುದನ್ನು ಬೆಳೆಸಿಕೊಂಡು ಶಿಕ್ಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರೊಂದಿಗೆ ಪೋಷಕರೂ ಸಹ ಶಿಕ್ಷಕರೊಂದಿಗೆ ಕೈಜೋಡಿಸಿ ಮಕ್ಕಳ ನಡೆ, ನುಡಿ, ಉತ್ತಮ ಸಂಸ್ಕೃತಿಗಳ ಆಚರಣೆಗೆ ಒತ್ತು ನೀಡಿ ಮುಗ್ಧ ಮಕ್ಕಳನ್ನು ಉತ್ತಮ ಪ್ರಜೆಯಾಗಿಸಲು ಸಹಕಾರಿಯಾಗಬೇಕೆಂದು ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಶಾಲಾ ಸುಧಾರಣಾ ಸಮಿತಿಯ ಅಧ್ಯಕ್ಷ ನಾಗರಾಜ್ ಗೌಡ, ಈ ಸಂಸ್ಥೆಯು 22 ವರ್ಷದಿಂದ ಮಕ್ಕಳಿಗೆ ಶಿಕ್ಷಣ ನೀಡುತ್ತಿದೆ. ಈ ಸಂಸ್ಥೆಯು ಇನ್ನೂ ಹೆಚ್ಚಿನ ಅಭಿವೃದ್ಧಿ ಹೊಂದಬೇಕಾಗಿದೆ. ಈ ಅಭಿವೃದ್ಧಿಗೆ ಪೋಷಕರೂ ಹೆಚ್ಚಿನ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಶಾಲಾ ಸುಧಾರಣಾ ಸಮಿತಿಯ ಸದಸ್ಯ ಹೊಳಿಯಪ್ಪ ಮೈಲಾರಿಕೊಪ್ಪ, ವೀರಪ್ಪ ಗೌಡ್ರು ಲಾವಿಗ್ಗೇರಿ, ಸಂಸ್ಥೆಯ ವ್ಯವಸ್ಥಾಪಕ ಕೇಶವಮೂರ್ತಿ ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಮಮತಾ ಸ್ವಾಗತಿಸಿ, ನಾಗರತ್ನ ವಂದಿಸಿದರು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.