ಶಿವಮೊಗ್ಗ

ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಸಮವಸ್ತ್ರ: ಸಚಿವ ಕಿಮ್ಮನೆ

Published On :

ಕ.ಪ್ರ.ವಾರ್ತೆ    ಶಿರಾಳಕೊಪ್ಪ    ಮಾ. 9
ಈ ಹಿಂದೆ ಸರ್ಕಾರಗಳ ಅವಧಿಯಲ್ಲಿ ಮಕ್ಕಳಿಗೆ ಶಾಲೆಗಳು ಪ್ರಾರಂಭವಾದರೂ ಸರ್ಕಾರದ ಸಲಕರಣೆಗಳು ಸಮಯಕ್ಕೆ ದೊರೆಯುತ್ತಿರಲಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಿದ್ಯಾರ್ಥಿಗಳಿಗೆ ಸರ್ಕಾರದ ಎಲ್ಲ ಸವಲತ್ತುಗಳು ಸಮಯಕ್ಕೆ ಸರಿಯಾಗಿ ದೊರೆಯುತ್ತಿವೆ ಎಂದು ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದರು.
ಪುನೇದಹಳ್ಳಿಯಿಂದ ಶಿರಾಳಕೊಪ್ಪದವರೆಗೆ ನಡೆದ ಕಾಂಗ್ರೆಸ್ ಪಾದಯಾತ್ರೆ ನಂತರ ಶಿರಾಳಕೊಪ್ಪದ ಬಯಲು ರಂಗಮಂದಿರದಲ್ಲಿ ನಡೆದ ಪಕ್ಷದ ಬಹಿರಂಗ ಸಭೆಯಲ್ಲಿ ಮಾತನಾಡಿ, ಶಿಕ್ಷಣ ಇಲಾಖೆಯ ಎಲ್ಲ ಅಧಿಕಾರಿಗಳಿಗೆ ಯಾವುದೇ ಕಾರಣದಿಂದ ಮಕ್ಕಳಿಗೆ ಸಮವಸ್ತ್ರ ಸಹಿತ ಎಲ್ಲ ಸಾಮಗ್ರಿಗಳು ಸಮಯಕ್ಕೆ ಸರಿಯಾಗಿ ಸಿಗುವಂತಾಗಬೇಕು ಎಂದು ತಾಕೀತು ಮಾಡಿದ್ದೇನೆ ಎಂದರು.
ಮಾಜಿ ಸಚಿವ ಕುಮಾರ್ ಬಂಗಾರಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷ ಯಾವುದೇ ಜಾತಿ ಆಧಾರಿತ ಪಕ್ಷವಲ್ಲ. ಹೀಗಾಗಿ ದೇವರಾಜ್ ಅರಸ್,ಬಂಗಾರಪ್ಪ ಅವರಂತಹ ವ್ಯಕ್ತಿಗಳನ್ನು ಬೆಳೆಸಿ ಮುಖ್ಯಮಂತ್ರಿಯನ್ನಾಗಿ ಮಾಡಿತು ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್, ಶಿವಮೊಗ್ಗ ಶಾಸಕ ಪ್ರಸನ್ನಕುಮಾರ್, ಮಹದೇವಪ್ಪ, ತೀ.ನಾ ಶ್ರೀನಿವಾಸ, ವಿಜಯಲಕ್ಷ್ಮಿ ಪಾಟೀಲ್, ಶಿರಾಳಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ, ಶಿಕಾರಿಪುರ ಬ್ಲಾಕ್ ಅಧ್ಯಕ್ಷ ಗೋಣಿ ಮಾಲತೇಶ್, ಜಿಪಂ ಸದಸ್ಯ ಈಸೂರ ಬಸವರಾಜ್, ಶಿವಶಂಕರಪ್ಪ, ಜಿಪಂ ಮಾಜಿ ಉಪಾಧ್ಯಕ್ಷ ಅರುಣ, ಮಹೇಶ್ ಹುಲ್ಮಾರ್, ಶಿವು ನಾಯ್ಕ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.