ಬಿಎಸ್ವೈ ವಿರುದ್ಧ ಆಮ್ ಆದ್ಮಿ ಶ್ರೀಧರ್
ಶಿವಮೊಗ್ಗ: ಯಡಿಯೂರಪ್ಪ ಅವರ ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸುವುದಾಗಿ ಘೋಷಿಸಿದ್ದ ಆಮ್ ಆದ್ಮಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಕೊನೆಗೂ ಪರಿಸರ ಹೋರಾಟಗಾರನನ್ನು ಕಣಕ್ಕಿಳಿಸಿದೆ. ಹಲವು ದಶಕಗಳಿಂದ ವಿವಿಧ ಹೋರಾಟದಲ್ಲಿ ತೊಡಗಿಸಿಕೊಂಡಿರುವ, ಈಗಲೂ ಸಕ್ರಿಯವಾಗಿರುವ ಶ್ರೀಧರ್ ಕಲ್ಲಹಳ್ಳ (ಕೆ.ಜಿ. ಶ್ರೀಧರ್) ಅವರನ್ನು ತಮ್ಮ ಅಭ್ಯರ್ಥಿಯಾಗಿ ಘೋಷಿಸಿದ್ದಾರೆ.
ರೈತ ಮುಖಂಡ ಕಡಿದಾಳು ಶಾಮಣ್ಣ ಸೇರಿದಂತೆ ಹಲವರನ್ನು ಸಂಪರ್ಕಿಸಿದ್ದ ಆಮ್ ಆದ್ಮಿ ಕೊನೆಗೆ ಶ್ರೀಧರ್ ಅವರ ಹೆಸರನ್ನು ಅಂತಿಮಗೊಳಿಸಿದೆ. ರೈತ ಸಂಘ ಸೇರಿದಂತೆ ಹಲವು ಸಂಘಟನೆಗಳ ಬೆಂಬಲ ಆಪ್ಗೆ ವ್ಯಕ್ತವಾಗಿದೆ. ಆಮ್ ಆದ್ಮಿ ಪಕ್ಷದ ಜಿಲ್ಲಾ ಸಂಚಾಲಕ ಡಾ. ಪ್ರೀತಮ್ ಅವರು ಶ್ರೀಧರ್ ಅವರಿಗೆ ಟಿಕೆಟ್ ಘೋಷಿಸಿರುವುದನ್ನು ಖಚಿತಪಡಿಸಿದ್ದು, ಭ್ರಷ್ಟಾಚಾರದ ವಿರುದ್ಧ ಆಮ್ ಆದ್ಮಿ (ಸಾಮಾನ್ಯ ವ್ಯಕ್ತಿ) ಹೋರಾಟ ಮುಂದುವರಿಯಲಿದೆ ಎಂದಿದ್ದಾರೆ.
ಹೋರಾಟಗಾರ: ಕೆ.ಜಿ. ಶ್ರೀಧರ್ ಅವರು ಚುನಾವಣಾ ರಾಜಕೀಯಕ್ಕೆ ಹೊಸಬರಾದರೂ ತುಂಗಾ ಮೂಲ ಉಳಿಸಿ ಹೋರಾಟ, ತುಂಗಭದ್ರಾ ಉಳಿಸಿ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು. ಕುದುರೆಮುಖ ಗಣಿಗಾರಿಕೆ ವಿರುದ್ಧ ಹೋರಾಟ ನಡೆಸಿದ್ದರು. ಪರಿಸರ ಸಂಬಂಧಿ ಹೋರಾಟದಲ್ಲಿ ಇವರು ಯಾವತ್ತಿಗೂ ಮುಂದು.
ಮ್ಯಾಗ್ಸೆಸ್ಸೆ ಪುರಸ್ಕೃತ ಕೆ.ವಿ. ಸುಬ್ಬಣ್ಣ ಅವರ ಜತೆಗೂಡಿ 1998ರಲ್ಲಿ ಇವರು ಮಲೆನಾಡಿನಾದ್ಯಂತ ಹಬ್ಬುತ್ತಿರುವ ಮಾನೋಕಲ್ಚರ್ ಪ್ಲಾಂಟೇಷನ್ ವಿರುದ್ಧ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ದಾವೆ ಹೂಡಿದ್ದರು. ಸಮಾಜ ಪರಿವರ್ತನ ಸಮುದಾಯ ಸಂಸ್ಥೆಯ ಎಸ್.ಆರ್. ಹಿರೇಮಠ್ ಅವರ ಜತೆಗೂಡಿ ಮಲೆನಾಡು ಜಾಗೃತಿ ಸಮುದಾಯ ಹುಟ್ಟುಹಾಕಿದ್ದರು. ಮಲೆನಾಡು ಭಾಗದ ರೈತರಿಗೆ ನೆರವಾಗಲು ರೂಪುಗೊಂಡಿರುವ ಮಲೆನಾಡು ಕೃಷಿ ಆಂದೋಲನ ಸಮಿತಿಯ ಸಂಚಾಲಕರಾಗಿದ್ದಾರೆ.
- ಹೊನ್ನಾಳಿ ಚಂದ್ರಶೇಖರ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

