ಶಿವಮೊಗ್ಗ

ಮಹಿಳೆಯರು ಸಮಾಜದೊಂದಿಗೆ ಬೆರೆತರೆ ಉನ್ನತಿ: ಲಕ್ಷ್ಮೀರಾಜು

Published On :

ಜೋಗ್‌ಫಾಲ್ಸ್: ಮಹಿಳಾ ಸಂಘಗಳಿಂದ ಉತ್ತಮ ಸಮಾಜವನ್ನು ರೂಪಿಸಲು ಸಾಧ್ಯ. ಮಹಿಳೆಯರು ಕೇವಲ ನಾಲ್ಕು ಗೋಡೆಗಳ ಮಧ್ಯೆ ಉಳಿಯದೆ ನಮ್ಮ ಸುತ್ತಮುತ್ತಲಿನ ಸಮಾಜದೊಂದಿಗೆ ಬೆರೆತಾಗ ಉನ್ನತಿ ಸಾಧ್ಯ. ಮಹಿಳೆಯರು ಬಿಡಿವಿನ ಸಮಯದಲ್ಲಿ ಕ್ರಿಯಾಶೀಲರಾಗಿ ಸಮಾಜ ಸೇವೆ ಸಲ್ಲಿಸುವಲ್ಲಿ ಮುಂದಾಗಬೇಕು ಎಂದು ಶಾರದಾ ಮಹಿಳಾ ಸಮಾಜದ ಅಧ್ಯಕ್ಷೆ ಲಕ್ಷೀ ರಾಜು ತಿಳಿಸಿದರು.
ಅವರು ಕಾರ್ಗಲ್‌ನ ಕೆಪಿಸಿ ಶಾರದಾ ಮಹಿಳಾ ಸಮಾಜದ 39ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕೆಪಿಸಿ ಸಿವಿಲ್ ವಿಭಾಗದ ಪ್ರಭಾರ ಅಧೀಕ್ಷಕ ಅಭಿಯಂತರರಾದ ಮೋಹನ್ ಮೂರ್ತಿ, ಮಹಿಳಾ ಸಂಘಗಳಿಂದ ಸಮಾಜವನ್ನು ಉತ್ತಮವಾಗಿ ರೂಪಿಸಲು ಸಾಧ್ಯ.  ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ತಮ್ಮ ಛಾಪನ್ನು ಮೂಡಿಸುತ್ತಿದ್ದು, ತಮ್ಮ ಜ್ಞಾನ ಸಂಪತ್ತನ್ನು ಹೆಚ್ಚಿಸಿಕೊಂಡಾಗ ತಮಗೆ ದೊರೆಯಬೇಕಾದ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ನಾಟಿ ವೈದ್ಯ ವೈ.ಜಿ. ಮಹಾಬಲೇಶ್ವರ ರಾವ್ ಅವರನ್ನು ಸನ್ಮಾನಿಸಲಾಯಿತು. ಡಾ. ಉಷಾ ಜಿ. ಬೆನ್ಹಾಳ್, ಪಪಂ ಅಧ್ಯಕ್ಷ ಕೆ.ಸಿ. ಹರೀಶ್‌ಗೌಡ ಉಪಸ್ಥಿತರಿದ್ದರು.
ಈ ಸಂದಂರ್ಭದಲ್ಲಿ 7ನೇ ಮತ್ತು 10ನೇ ತರಗತಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಸವಿತಾ ಗೋಪಾಲ್ ನಿರೂಪಿಸಿದರು, ಸ್ನೇಹ ಪಾಪಣ್ಣ ಸ್ವಾಗತಿಸಿ, ವಾಣಿಶ್ರೀ ರವೀಂದ್ರ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.