ಶಸ್ತ್ರಾಸ್ತ್ರ ಒಪ್ಪಿಸಲು ಜಿಲ್ಲಾಧಿಕಾರಿ ಸೂಚನೆ
ಶಿವಮೊಗ್ಗ: ಲೋಕಸಭಾ ಚುನಾವಣೆಯು ಮುಕ್ತವಾಗಿ ಹಾಗೂ ನ್ಯಾಯಸಮ್ಮತವಾಗಿ ನಡೆಯಬೇಕಾಗಿರುವ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲಾದ್ಯಂತ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಶಸ್ತ್ರಾಸ್ತ್ರ ಹೊಂದಿರುವವರು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಅಂದರೆ ಮೇ 17ರವರೆಗೆ ಸಮೀಪದ ಪೊಲೀಸ್ ಠಾಣೆಗೆ ನೀಡುವಂತೆ ಜಿಲ್ಲಾಧಿಕಾರಿ ವಿಫುಲ್ ಬನ್ಸಲ್ ತಿಳಿಸಿದ್ದಾರೆ.
ಲೋಕಸಭಾ ಚುನಾವಣೆ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಯಬೇಕಾದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡು ಬರುವ ಹಿನ್ನೆಲೆಯಲ್ಲಿ ಪೊಲೀಸ್ ಅಧಿನಿಯಮದನ್ವಯ ಜಿಲ್ಲೆಯಲ್ಲಿ ಯಾವುದೇ ವ್ಯಕ್ತಿಗಳು ಮಾರಕಾಸ್ತ್ರಗಳನ್ನು ಹಿಡಿದು ಸಂಚರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ಈ ಆದೇಶವು ಮೇ 17ರವರೆಗೂ ಅಂದರೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳುವವರೆಗೆ ಜಾರಿಯಲ್ಲಿರಲಿದೆ. ಈ ಆದೇಶವು ಸರ್ಕಾರಿ ಕರ್ತವ್ಯದಲ್ಲಿರುವ ರಕ್ಷಣಾ ಸಿಬ್ಬಂದಿಗೆ, ಎಂಪಿಎಂ, ವಿಐಎಸ್‌ಎಲ್ ಮತ್ತು ರಾಷ್ಟ್ರೀಕೃತ ಬ್ಯಾಂಕ್ ಇತ್ಯಾದಿಗಳಲ್ಲಿ ಭದ್ರತಾ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ, ಅಧಿಕೃತ ಪರವಾನಗಿ ಹೊಂದಿರುವ ಆಯುಧಗಳಿಗೆ ಅನ್ವಯಿಸುವುದಿಲ್ಲ.
ಪರವಾನಗಿದಾರರು ತಮ್ಮ ವ್ಯಾಪ್ತಿಗೊಳಪಡುವ ಪೊಲೀಸ್ ಠಾಣೆಯಲ್ಲಿ ಆಯುಧಗಳನ್ನು ಠೇವಣಿಕರಿಸಲು ಹಾಗೂ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಿ ಕ್ರಮವಹಿಸುವಂತೆ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು, ತಹಸೀಲ್ದಾರರಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

