ಬಂಗಾರಮಕ್ಕಿಯಲ್ಲಿ ಮಲೆನಾಡ ಉತ್ಸವ
ಕ.ಪ್ರ.ವಾರ್ತೆ, ಶಿವಮೊಗ್ಗ, ಮಾ.10
ಜಿಲ್ಲೆಯ ಗಡಿಯಲ್ಲಿರುವ ಹೊನ್ನಾವರ ತಾಲೂಕಿನ ಶ್ರೀಕ್ಷೇತ್ರ ಬಂಗಾರಮಕ್ಕಿ, ಗೇರುಸೊಪ್ಪದಲ್ಲಿ ಎರಡು ವರ್ಷಕ್ಕೊಮ್ಮೆ ನಡೆಯುವ ಮಲೆನಾಡ ಉತ್ಸವವು ಏ.8 ರಿಂದ 14ರ ವರೆಗೆ ನಡೆಯಲಿದೆ.
ಮಾರುತಿ ಗುರೂಜಿಯವರ ನೇತೃತ್ವದಲ್ಲಿ ನಡೆಯುವ ಈ ಮಲೆನಾಡ ಉತ್ಸವ ಜಾನಪದ ಕಲೆಗಳ ಉಳಿಯುವಿಕೆ, ಮುಂದಿನ ಪೀಳಿಗೆಯವರಿಗೆ ಅದರ ಜ್ಞಾನವನ್ನು ಪಸರಿಸುವ ಹಾಗೂ ಯುವ ಜನತೆಯಲ್ಲಿ ಈ ಕುರಿತು ಅರಿವು ಮೂಡಿಸುವ, ಅವರನ್ನು ಪ್ರೋತ್ಸಾಹಿಸುವ ಮಹತ್ತರ ಉದ್ದೇಶದಿಂದ ನಡೆಸಲಾಗುತ್ತಿದೆ ಎಂದು ಸಮಿತಿ ಕಾರ್ಯದರ್ಶಿ ಹೇಳಿದ್ದಾರೆ.
ಮಲೆನಾಡಿನ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಕೊಡಗು, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ವೈವಿಧ್ಯಮಯ ಜಾನಪದ, ಗ್ರಾಮೀಣ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಗಮವಾದ ಈ ಮಲೆನಾಡ ಉತ್ಸವ ಈ ಎಲ್ಲಾ ಜಿಲ್ಲೆಗಳ ವಿವಿಧ ಕಲಾ ಪ್ರಕಾರಗಳ ಪ್ರದರ್ಶನ ಒಳಗೊಂಡಿದೆ. ಈ ಸಂದರ್ಭದಲ್ಲಿ ಅನೇಕ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.
ಒಂಭತ್ತು ಜಿಲ್ಲೆಯ ಪಿಯುಸಿ ಹಾಗೂ ಪದವಿ ವಿದ್ಯಾರ್ಥಿಗಳಿಗಾಗಿ ಸ್ಪರ್ಧಿಗಳಿಗಾಗಿ ಚಿತ್ರಕಲಾ ಸ್ಪರ್ಧೆ (ವಿಷಯ: ಗ್ರಾಮೀಣ ಬದುಕು), ಸಾಂಪ್ರದಾಯಿಕ ಶೈಲಿಯ (ಚುಕ್ಕಿ) ರಂಗೋಲಿ ಸ್ಪರ್ಧೆ, 18ರಿಂದ 22 ವರ್ಷದ ವಿದ್ಯಾರ್ಥಿಗಳಿಗಾಗಿ ಕವಿಗೋಷ್ಠಿ ಸಾಹಿತ್ಯ ಗೋಷ್ಠಿ, 18 ವರ್ಷ ಮೇಲ್ಪಟ್ಟ ಸ್ವಉದ್ಯೋಗಿಗಳಿಗೆ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯುವುದು.
ಕವಿಗೋಷ್ಠಿ, ಸಾಹಿತ್ಯ ಗೋಷ್ಠಿ ಹಾಗೂ ಎಲ್ಲಾ ಸ್ಪರ್ಧೆಗಳು ಮತ್ತು ಕಾರ್ಯಕ್ರಮಗಳಿಗೆ ಹೆಸರನ್ನು ನೋಂದಾಯಿಸಲು ಇಚ್ಛಿಸುವವರು ಮಾಹಿತಿಗೆ ದೂ. 08387268333, 268545, ಗಣಪತಿ ಹೆಗಡೆ- ಮೊ.9448800330 ರಾಮಚಂದ್ರ ಭಟ್ಟರು-ಮೊ. 94495 48296.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

