ಶಿವಮೊಗ್ಗ

ಸಾಗರ ನಗರಸಭೆ ಅಧ್ಯಕ್ಷೆ ಲಲಿತಮ್ಮ

Published On :

ಕ.ಪ್ರ.ವಾರ್ತೆ ಟಿ ಸಾಗರ ಟಿ ಮಾ.11
ಇಲ್ಲಿನ ನಗರಸಭೆಯ ಅಧ್ಯಕ್ಷರಾಗಿ ಎನ್.ಲಲಿತಮ್ಮ ಹಾಗೂ ಉಪಾಧ್ಯಕ್ಷರಾಗಿ ಸೈಯದ್ ಇಕ್ಬಾಲ್ ಆಯ್ಕೆ ಆಗಿದ್ದಾರೆ.
ಮಂಗಳವಾರ ನಡೆದ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಕಣದಲ್ಲಿದ್ದ ಎನ್.ಲಲಿತಮ್ಮ ಅವಿರೋಧವಾಗಿ ಆಯ್ಕೆಯಾದರು.
ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಸೈಯದ್ ಇಕ್ಬಾಲ್ ಹಾಗೂ ಬಿಜೆಪಿಯಿಂದ ಸಂತೋಷ ಶೇಟ್ ಸ್ಪರ್ಧಿಸಿದ್ದರು. ಸೈಯದ್ ಇಕ್ಬಾಲ್ 27 ಮತ ಪಡೆದು ಜಯ ಗಳಿಸಿದರು. ಸಂತೋಷ್ ಶೇಟ್ 3 ಮತ ಪಡೆದರು.
ನಗರಸಭೆಯಲ್ಲಿ ಒಟ್ಟು 31 ಸ್ಥಾನಗಳಿವೆ. ಈ ಪೈಕಿ ಕಾಂಗ್ರೆಸ್ ಪಕ್ಷ 24, ಬಿಜೆಪಿ 4, ಜೆಡಿಎಸ್, ಕೆಜೆಪಿ ಹಾಗೂ ಪಕ್ಷೇತರರು ತಲಾ ಒಬ್ಬ ಸದಸ್ಯರಿದ್ದಾರೆ. ಈ ಬಾರಿ ಅಧ್ಯಕ್ಷ ಸ್ಥಾನಕ್ಕೆ ಎಸ್.ಸಿ. ಮೀಸಲು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ವರ್ಗ ಮೀಸಲಾತಿ ನಿಗದಿ ಆಗಿತ್ತು. ಕಾಂಗ್ರೆಸ್ ಪಕ್ಷ 24 ಸ್ಥಾನಗಳನ್ನು ಹೊಂದಿದ್ದರೂ, ಪಕ್ಷೇತರ ಅಭ್ಯರ್ಥಿ ರವಿ ಜಂಬಗಾರು, ಜೆಡಿಎಸ್ ಸದಸ್ಯ ಎಸ್.ಎಲ್. ಮಂಜುನಾಥ್ ಹಾಗೂ ಕೆಜೆಪಿಯಿಂದ ಆಯ್ಕೆಯಾಗಿದ್ದ ಜಾಹೀರ ಬೇಗಂ ಕಾಂಗ್ರೆಸ್ಸಿಗೆ ಬೆಂಬಲ ಸೂಚಿಸಿದ್ದಾರೆ. ಇದರಿಂದಾಗಿ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ 27 ಮತ ಪಡೆಯುವಂತಾಯಿತು.
ಚುನಾವಣಾಧಿಕಾರಿಯಾಗಿ ಉಪವಿಭಾಗಾಧಿಕಾರಿ ಡಾ.ಉದಯಕುಮಾರ್ ಶೆಟ್ಟಿ ಕಾರ್ಯನಿರ್ವಹಿಸಿದರು. ತಹಸೀಲ್ದಾರ್ ಎಚ್.ಭಾಗ್ಯಲಕ್ಷ್ಮೀ, ಪೌರಾಯುಕ್ತ ಚಂದ್ರಶೇಖರ್ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.