ಶಿವಮೊಗ್ಗ

ಇಂದು ಪಪಂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ

Published On :

ಶಿರಾಳಕೊಪ್ಪ:  ಪಟ್ಟಣ ಪಂಚಾಯ್ತಿಯ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಬುಧವಾರ ನಡೆಯಲಿದೆ. ಅಧ್ಯಕ್ಷ ಉಪಾಧ್ಯಕ್ಷ ಗಾದಿ ಹಿಡಿಯಲು ತೆರಮರೆಯಲ್ಲಿ ತೀವ್ರ ಪೈಪೋಟಿ ನಡೆದಿದೆ. ಕಳೆದ ವರ್ಷ ಮಾ.8 ರಂದು ಚುನಾವಣೆ ನಡೆದು, ಮೀಸಲಾತಿ ಹಿನ್ನೆಲೆ ಮುಂದೆ ಹೋಗಿದ್ದ ಚುನಾವಣೆಗೆ 1 ವರ್ಷ 4 ದಿನಗಳ ನಂತರ ಚುನಾವಣೆ ನಡೆಯುತ್ತಿದೆ. ಒಟ್ಟು 15 ಸ್ಥಾನ ಹೊಂದಿರುವ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿಯ 5 ಸದಸ್ಯರು, ಕಾಂಗ್ರೆಸ್‌ನ 5 ಸದಸ್ಯರು ಹಾಗೂ 4 ಸ್ವತಂತ್ರ ಸದಸ್ಯರು ಹಾಗೂ ಜೆಡಿಎಸ್ 1 ಸದಸ್ಯರನ್ನು ಹೊಂದಿದೆ. ಉಭಯ ಬಣಗಳಾದ ಬಿಜೆಪಿ ಮತ್ತು ಕಾಂಗ್ರೆಸ್ 2 ಪಕ್ಷಗಳು ಅಧಿಕಾರ ಹಿಡಿಯಲು ಶತಪ್ರಯತ್ನ ನಡೆಸಿದ್ದು, ಸಾಕಷ್ಟು ಸದಸ್ಯರು ಕಳೆದ 5-6 ದಿನಗಳಿಂದ ಪಟ್ಟಣ ಖಾಲಿ ಮಾಡಿದ್ದಾರೆ. ನಾಳೆ ಚುನಾವಣೆ ನಡೆಯಲಿದ್ದು, ತೀವ್ರ ಕುತೂಹಲ ಕೆರಳಿಸಿದೆ. ಚುನಾವಣಾ ಅಧಿಕಾರಿಯಾಗಿ ತಹಸೀಲ್ದಾರ್ ಧರ್ಮೋಜಿರಾವ್ ಕಾರ್ಯನಿರ್ವಹಿಸುತ್ತಿದ್ದಾರೆ.
ಅಹವಾಲು ಸ್ವೀಕಾರ
ಶಿವಮೊಗ್ಗ: ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಅಧಿಕಾರಿಗಳು ಮಾರ್ಚ್ ಮಾಹೆಯ ನಿಗದಿತ ದಿನಾಂಕದಂದು ಜಿಲ್ಲೆಯ ಆಯ್ದ ಗ್ರಾಪಂ ಮತ್ತು ಪ್ರವಾಸಿ ಮಂದಿರಗಳಲ್ಲಿ ಹಾಜರಿದ್ದು, ಸಾರ್ವಜನಿಕರಿಂದ ಅಹವಾಲು  ಸ್ವೀಕರಿಸಲಿದ್ದಾರೆ. ಮಾರ್ಚ್ 13ರಂದು ಬೆಳಗ್ಗೆ 11 ರಿಂದ 1 ಗಂಟೆ ವರೆಗೆ ಸಾಗರ ತಾಲೂಕಿನ ಕಾರ್ಗಲ್ ಪಟ್ಟಣ ಪಂಚಾಯ್ತಿ ಸಭಾಂಗಣದಲ್ಲಿ ಹಾಜರಿದ್ದು, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ಸಾರ್ವಜನಿಕರು ಸರ್ಕಾರಿ ಕಚೇರಿಗಳಲ್ಲಿ ತಮ್ಮ ಕೆಲಸಗಳ ಕುರಿತು ಆಗುತ್ತಿರುವ ಅನಗತ್ಯ ವಿಳಂಬ, ಮತ್ತಿತರ ಸಮಸ್ಯೆಗಳಿದ್ದಲ್ಲಿ ನಿಗದಿತ ದಿನಾಂಕ, ಸಮಯ ಮತ್ತು ಸ್ಥಳಗಳಲ್ಲಿ ಖುದ್ದಾಗಿ ಹಾಜರಿದ್ದು, ದೂರುಗಳನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಎಂ.ಪಿ. ನಾಗರಾಜು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.