ಸರ್ವರ ಸಹಕಾರದಿಂದ ಪ್ರಗತಿ ಸಾಧ್ಯ
ಸೊರಬ: ಹೆಣ್ಣು ಶಿಕ್ಷಿತ ಛಸಮಾಜಕ್ಕೆ ಕಣ್ಣಾಗಬೇಕು. ಎಲ್ಲರ ಸಹಕಾರದಿಂದ ಮಾತ್ರ ಪ್ರಗತಿ ಹೊಂದಲು ಸಾಧ್ಯ ಎಂದು ಸ್ನೇಹ ಸುರಭಿ ಮಹಿಳಾ ಸಂಘದ ಅಧ್ಯಕ್ಷೆ ರೇಣುಕಮ್ಮ ಗೌಳಿ ತಿಳಿಸಿದರು.
ಪಟ್ಟಣದ ಗುರು ಭವನದ ಬಳಿ ಇರುವ ಅಂಗನವಾಡಿ ಕೇಂದ್ರದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರ ಶ್ರೇಯೋಭಿವೃದ್ಧಿಗಾಗಿ ಈ ಸಂಸ್ಥೆಯನ್ನು ಸ್ಥಾಪಿಸಲಾಗಿದ್ದು, ಸಂಸ್ಥೆ ಸ್ಥಾಪನೆಯಾದ 2 ವರ್ಷದಲ್ಲೇ ಜನಪ್ರಿಯವಾಗಿದೆ. ಸಂಸ್ಥೆ ವತಿಯಿಂದ ಇನ್ನಷ್ಟು ಸೇವಾ ಕಾರ್ಯ ನಡೆಸುವ ಯೋಜನೆ ರೂಪಿಸಲಾಗಿದ್ದು, ಸರ್ವರ ಸಹಕಾರ ಅಗತ್ಯ ಎಂದರು.
ಪತ್ರಕರ್ತೆ ಸಂಧ್ಯಾ ಯು.ಎಲ್. ಮಾತನಾಡಿ, ಸಂಘ- ಸಂಸ್ಥೆಗಳು ಸ್ವಹಿತಕ್ಕಾಗಿ ದುಡಿಯದೆ ಸಮಾಜಮುಖಿ ಧ್ಯೇಯೋದ್ದೇಶಗಳ ಈಡೇರಿಕೆಗಾಗಿ ಕಾರ್ಯ ನಿರ್ವಹಿಸಿದಾಗ ಮಾತ್ರ ಸಾಧನೆ ಮತ್ತು ಪ್ರಗತಿ ಲಭ್ಯವಾಗುತ್ತದೆ ಎಂದರು.
ಲಯನ್ಸ್ ಪ್ರಾಂತೀಯ ಅಧ್ಯಕ್ಷ ಟಿ.ಆರ್. ಸುರೇಶ್, ಪುಷ್ಪಾ ಭಾವಿಮಠ, ಭಾರತಿ ಹನುಮಂತಪ್ಪ, ಪದ್ಮಶ್ರೀ, ಸರಸ್ವತಿ ಜೆ. ನಾವುಡ, ಶಿಕ್ಷಕ ಚಂದ್ರಪ್ಪಮಾಸ್ತರ್, ಲಕ್ಷ್ಮೀ ಮುರುಳೀಧರ್, ಪೂರ್ಣಿಮಾ ಭಾವೆ ವೀಣಾ ಟೇಮ್ಕರ್, ಶೃತಿ ಹೆಬ್ಬಾರ್, ಶೇಖರಮ್ಮ, ಹಸೀನಾಬಾನು ಮೊದಲಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

