ಬ್ಯಾಂಕ್ ಸಾಲ ಪಡೆಯಿರಿ: ಮುರಘಾಶ್ರೀ
ಆಯನೂರು: ಮೀಟರ್ ಬಡ್ಡಿಗೆ ಸಾಲ ಪಡೆದುಕೊಳ್ಳುವ ಬದಲು ರಾಷ್ಟ್ರೀಕೃತ ಬ್ಯಾಂಕುಗಳು, ಸಹಕಾರ ಸಂಘಗಳ ಮೂಲಕ ಸಾಲ ಪಡೆದು ಜೀವನ ಹಸನು ಮಾಡಿಕೊಳ್ಳುವಂತೆ ಆನಂದಪುರ ಬೆಕ್ಕಿನಕಲ್ಮಠದ ಡಾ.ಶ್ರೀಮನ್ಮಹಾರಾಜ ನಿರಂಜನ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಕರೆ ನೀಡಿದರು. ಆಯನೂರಿನಲ್ಲಿ ಸ್ಥಳಾಂತರಗೊಂಡ ಕರ್ನಾಟಕ ಬ್ಯಾಂಕ್ ಶಾಖೆ ಹಾಗೂ ಎಟಿಎಂ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಕೆಲವೇ ಜನರ ಬಳಿ ಹಣ ಶೇಖರಣೆ ಒಳ್ಳೆಯ ಬೆಳವಣಿಗೆಯಲ್ಲ. ಬ್ಯಾಂಕಿನಲ್ಲಿದ್ದರೆ ಹಣ ಚಲಾವಣೆಯಾಗುತ್ತದೆ. ಸಾಕಷ್ಟು ಮಂದಿಗೆ ಉಪಯೋಗವೂ ಆಗುತ್ತದೆ. ಈ ನಿಟ್ಟಿನಲ್ಲಿ ಜನಸಾಮಾನ್ಯರು ಯೋಚಿಸಬೇಕೆಂದರು. ಕರ್ನಾಟಕ ಬ್ಯಾಂಕ್ ಕೇಂದ್ರ ಕಚೇರಿಯ ಮಹಾ ಪ್ರಬಂಧಕ ಪಿ.ಜಯರಾಂ ಹಂದೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬ್ಯಾಂಕಿನ ಗ್ರಾಹಕರು, ರೈತರು, ಜನರು ಬ್ಯಾಂಕಿನ ಸಿಬ್ಬಂದಿ ಹಾಜರಿದ್ದರು. ಬ್ಯಾಂಕಿನ ಕೇಂದ್ರ ಕಚೇರಿಯ ಪ್ರಬಂಧಕ ರಂಗನಾಥ ಸ್ವಾಗತಿಸಿ, ಆಯನೂರು ಶಾಖಾ ಪ್ರಬಂಧಕ ಯೋಗೇಶ ಬಾಪಟ್ ವಂದಿಸಿ, ರಾಘವೇಂದ್ರ ಉಡುಪ ಕಾರ್ಯಕ್ರಮ ನಿರೂಪಿಸಿದರು.
'ಹೆಸರು ಸೇರ್ಪಡೆ ಖಚಿತಪಡಿಸಿಕೊಳ್ಳಿ'
ಶಿವಮೊಗ್ಗ: ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆ ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿ ಮತದಾರರನ್ನು ಕೋರಿದ್ದಾರೆ. ಮತದಾನ ಕೇಂದ್ರ ಇತ್ಯಾದಿ ವಿವರಗಳನ್ನು ಚುನಾವಣಾ ಆಯೋಗದ ಅಂತರ್ಜಾಲ ತಾಣ ಢಿಢಿಢಿ.ಜ್ಛ್ಟ್ಞಛ್ಠಟಿಛಡಿಛ್ಞಛ.್ಞಛ್ಠ.ಟ್ಝ್ಛಿ.್ಝಟಿ ನ್ನು ವೀಕ್ಷಿಸಬಹುದಾಗಿದೆ. ಅಲ್ಲದೇ ಮೊ.9243355223 ಸಂಖ್ಯೆಗೆ ಮತದಾರರ ಗುರುತಿನ ಚೀಟಿ ಸಂಖ್ಯೆಯನ್ನು ಮೊಬೈಲ್ ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದವರು ಹೇಳಿದ್ದಾರೆ. ಚುನಾವಣಾ ಆಯೋಗವು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ವರ್ಗಾವಣೆ ಹಾಗೂ ಹೆಸರನ್ನು ತೆಗೆದುಹಾಕುವ ಉದ್ದೇಶಕ್ಕಾಗಿ ವಿಶೇಷ ಆಂದೋಲನವನ್ನು ಏರ್ಪಡಿಸಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನಾನುಕೂಲವಾದ ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲು ಮಾರ್ಚ್ 16ರ ವರೆಗೂ ಅವಕಾಶ ಕಲ್ಪಿಸಲಾಗಿದೆ. ಅರ್ಹ ಮತದಾರರು ನಿಗದಿತ ನಮೂನೆಯ ಅರ್ಜಿಯನ್ನು ಭರ್ತಿ ಮಾಡಿ, ಸಂಬಂಧಿಸಿದ ಮತಗಟ್ಟೆ ಅಧಿಕಾರಿಗಳಲ್ಲಿ ಸಲ್ಲಿಸಬಹುದಾಗಿದೆ. ಅರ್ಹರು ಈ ಸೌಲಭ್ಯದ ಲಾಭ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

