ಹುಲ್ಮನಿಗೆ ಟಿಕೆಟ್: ಸಿಎಂ ಒಲವು
ಬೆಂಗಳೂರು: ಎಲ್ಲ ಪಕ್ಷಕ್ಕಿಂತ ಮೊದಲು ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿವ ಉತ್ಸಾಹ ತೋರಿದ್ದ ಕಾಂಗ್ರೆಸ್ಗೆ ಈಗ ಮೂರು ಕ್ಷೇತ್ರಗಳಲ್ಲಿ ಒಮ್ಮತದ ವ್ಯಕ್ತಿ ಹುಡುಕುವುದು ಕಗ್ಗಂಟಾಗಿ ಪರಿಣಮಿಸಿದೆ.
ಬುಧವಾರ ರಾತ್ರಿ ಕಾಂಗ್ರೆಸ್ನ 2ನೇ ಪಟ್ಟಿ ಪ್ರಕಟ ಸಾಧ್ಯತೆ ಇತ್ತು. ಉತ್ತರಕನ್ನಡ, ಶಿವಮೊಗ್ಗ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯಾರಾಗಬೇಕೆಂಬ ವಿಚಾರದಲ್ಲಿ ಬಿಕ್ಕಟ್ಟು ಸೃಷ್ಟಿಯಾಗಿದೆ.
ಕುಮಾರ್-ಹುಲ್ಮನಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿಚಾರದಲ್ಲಿ ಸ್ಥಳೀಯ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧವೇ ಕೋಪಗೊಂಡಿದ್ದಾರೆ. ಈಡಿಗ ಸಮುದಾಯಕ್ಕೆ ಸೇರಿದ ಮಾಜಿ ಸಿಎಂ ಬಂಗಾರಪ್ಪ ಅವರ ಪುತ್ರ ಕುಮಾರ್ ಅವರಿಗೆ ಟಿಕೆಟ್ ನೀಡುವುದು ಸೂಕ್ತ ಎಂಬುದು ಸ್ಥಳೀಯ ಶಾಸಕರ ಅಂಬೋಣ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಹಳೆಯ ಸ್ನೇಹಿತ ಡಾ.ಮಲ್ಲೇಶ ಹುಲ್ಮನಿ ಪರವಾಗಿದ್ದಾರೆ.
ಬಿಕ್ಕಟ್ಟು ನಿವಾರಿಸುವ ಜವಾಬ್ದಾರಿವಿಧಾನಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪಅವರ ಮೇಲೆ ಹೊರಿಸುವ ಪ್ರಯತ್ನ ನಡೆದಿತ್ತು. ಆದರೆ ಇದಕ್ಕೆ ಒಪ್ಪದ ಕಾಗೋಡು ನೀವೇ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

