ಮತದಾನ ಮಾಡಿ ಮೌಲ್ಯ ಕಾಪಾಡಿ: ಡಾ. ಅಶೋಕ
ಸಾಗರ: ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಅಮೂಲ್ಯವಾದ ಹಕ್ಕಾಗಿದ್ದು, ಯುವಜನರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯವನ್ನು ಎತ್ತಿ ಹಿಡಿಯಬೇಕು ಎಂದು ಪ್ರಾಚಾರ್ಯ ಡಾ. ಅಶೋಕ ಡಿ. ರೇವಣಕರ್ ಹೇಳಿದರು.
ಇಲ್ಲಿನ ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಯುವ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಿವುಡ ಸರ್ಕಾರ ನೀತಿಯನ್ನು ಪ್ರಜಾತಂತ್ರ ವ್ಯವಸ್ಥೆಯಿಂದ ದೂರ ಮಾಡುವ ಹೊಣೆಗಾರಿಕೆ ಎಲ್ಲರ ಮೇಲೆ ಇದೆ. ಮತದಾನದ ಮೂಲಕ ನಮ್ಮ ಸಮಸ್ಯೆಗಳಿಗೆ ಸ್ಪಂದಿಸುವ ಜನಪ್ರತಿನಿಧಿಯನ್ನು ಆಯ್ಕೆ ಮಾಡಬೇಕು. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾವಣೆ ಮಾಡಿಕೊಳ್ಳದ ವಿದ್ಯಾರ್ಥಿನಿಯರು ಕಾಲೇಜಿನಲ್ಲಿಯೇ ಮತದಾರರ ಪಟ್ಟಿಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಉಪ ತಹಸೀಲ್ದಾರ್ ಮಂಜುನಾಥ್ ಮಾತನಾಡಿ, ಯುವ ಮತದಾರರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಮಾ.16ರೊಳಗೆ ಸೂಕ್ತ ದಾಖಲೆಗಳನ್ನು ಸಲ್ಲಿಸಿ ಮತದಾನದ ಹಕ್ಕು ಪಡೆಯಬೇಕು ಎಂದು ಹೇಳಿದರು. ಡಾ. ಓ.ಜಿ. ಬಸವನಗೌಡ, ಪ್ರೊ. ಹರ್ಷವರ್ದನ್, ಡಾ. ಪ್ರಭಾಕರ ರಾವ್, ಡಾ. ರುದ್ರಪ್ಪ, ಪ್ರೊ. ಎ. ಗಣೇಶಭಟ್, ಪ್ರೊ. ಅಮರನಾಥ್, ಪಿ. ಅನುಶ್ರೀ ಮತ್ತು ಆರ್. ಪ್ರಿಯಾಂಕ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

