ಬಸ್ ನಿಲ್ದಾಣದಲ್ಲಿ ಸೌಕರ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ
ಕ.ಪ್ರ.ವಾರ್ತೆ ಟಿ ಶಿವಮೊಗ್ಗ ಟಿ ಮಾ.14
ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಪ್ರಾಂಜಲ ಶಿವಪ್ಪನಾಯಕ ಸೇನೆ ಕಾರ್ಯಕರ್ತರು ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕೋಟಿಗಟ್ಟಲೆ ವೆಚ್ಚ ಮಾಡಿ ನಿರ್ಮಿಸಿರುವ ಖಾಸಗಿ ಬಸ್ ನಿಲ್ದಾಣ ನಿರ್ವಹಣೆ ಇಲ್ಲದೇ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದೆ. ಕೂಡಲೇ ಇಲ್ಲಿಗೆ ಕುಡಿಯುವ ನೀರು, ಭದ್ರತಾ ಸೌಲಭ್ಯ ಕಲ್ಪಿಸಬೇಕು. ಸ್ವಚ್ಛತೆ ಕಾಪಾಡಬೇಕು ಎಂದು ಒತ್ತಾಯಿಸಿದರು.
ಎಲ್ಲೆಂದರಲ್ಲಿ ಕಸ ಹಾಕುವುದು, ಉಗುಳುವುದು ನಡೆಯುತ್ತಿದೆ. ಸೂಕ್ತ ಭದ್ರತೆ ಇಲ್ಲದೇ, ಕಾವಲುಗಾರರಿಲ್ಲದೇ ಅವ್ಯವಸ್ಥೆಯ ಆಗರವಾಗಿದೆ. ಬಸ್ ನಿಲ್ದಾಣದ ಸುತ್ತಮುತ್ತ ಅನಧಿಕೃತ ಕ್ಯಾಂಟೀನ್ ಹಾಗೂ ಮಳಿಗೆಗಳಿವೆ. ಒಳಗೆ ಇರುವ ಮಳಿಗೆಗಳ ಬಾಡಿಗೆ ಹೆಚ್ಚಾಗಿದೆ. ಮಳಿಗೆ ಪಡೆದವರು ವ್ಯಾಪಾರ ಇಲ್ಲದೇ ಬಾಡಿಗೆ ಕಟ್ಟಲು ಪರದಾಡುವಂತಾಗಿದೆ. ಈ ಎಲ್ಲಾ ವಿಷಯಗಳ ಬಗ್ಗೆ ಪಾಲಿಕೆ ಉಪಮಹಾಪೌರರಿಗೆ ದೂರು ನೀಡಿದರೂ ಸಹ ಉಪಯೋಗವಾಲಿಲ್ಲ ಎಂದು ಆರೋಪಿಸಿದರು.
ಈ ಸಂದರ್ಭ ಭದ್ರಾವತಿ ವಾಸು, ಸಣ್ಣಮಲ್ಲಪ್ಪ, ಪಂಚಾಕ್ಷರಯ್ಯ ಹಿರೇಮಠ, ಜಾರ್ಜ್ ತಾವರೋ, ಬಸವರಾಜಪ್ಪ, ಜೆ.ಪಿ. ಜಗನ್ನಾಥ್, ರಾಜೀವ್ ಶೆಟ್ಟಿ, ಚಿಕ್ಕೇಗೌಡ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

